ರಾಜ್ಯಾದ್ಯಂತ ಪ್ರತಿಭಟನೆ/ಧರಣಿ

Picture of RB NEWS

RB NEWS

Bureau Report

ಉಡುಪಿ : ದೆಹಲಿ ರೈತ ಹೋರಾಟದ ವಾಪಸ್ಸಾತಿ ಸಂದರ್ಭದಲ್ಲಿ ನೀಡಿದ್ದ ಲಿಖಿತ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಮರಣಾಂತ ಉಪವಾಸ ಕುಳಿತಿರುವ ಹಿರಿಯ ರೈತ ನಾಯಕ ಶ್ರೀ ಜಗಜಿತ್ ಸಿಂಗ್ ದಲ್ಲೆವಾಲರವರ ಪ್ರಾಣ ಉಳಿಸಲು ತಕ್ಷಣ ಕೇಂದ್ರ ಸರಕಾರ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಮತ್ತು ಪ್ರಮುಖ 7 ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ/ಧರಣಿ ನಡೆಸಲು ಕರೆ ನೀಡಲಾಗಿದೆ.

ಉಡುಪಿಯಲ್ಲಿ ಮಣಿಪಾಲದ ಜಿಲ್ಲಾಧಿಕಾರಿ ಮೂಲಕ ರಾಷ್ಟಪತಿಗಳಿಗೆ ಹಾಗೂ ಪ್ರಧಾನ ಮಂತ್ರಿ ಯವರಿಗೆ
ಸಂಯುಕ್ತ ಹೋರಾಟ ಕರ್ನಾಟಕ ಉಡುಪಿ ಜಿಲ್ಲೆ, ಕರ್ನಾಟಕ ಪ್ರಾಂತ ರೈತ ಸಂಘ ಉಡುಪಿ ಜಿಲ್ಲಾ ಸಂಚಾಲನ ಸಮಿತಿ ಹಾಗೂ ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ ಉಡುಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಕರ್ನಾಟಕ ಪ್ರಾಂತ ರೈತ ಸಂಘದ ಉಡುಪಿ ಜಿಲ್ಲಾ ಸಂಚಾಲಕ ಚಂದ್ರಶೇಖರ್, ರೈತ ಸಂಘದ ಮುಖಂಡ ಅನಿಲ್ ಬಾರ್ಕೂರ್, ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘದ ರಾಜ್ಯ ಮುಖಂಡ ವೆಂಕಟೇಶ್ ಕೋಣಿ , ಉಡುಪಿ ಜಿಲ್ಲಾ ಕಾರ್ಯದರ್ಶಿ ಕವಿರಾಜ್. ಎಸ್.ಕಾಂಚನ್,ಮುಂಡರಾದ ಉಮೇಶ್ ಕುಂದ್,ನಳಿನಿ ಹಾಗೂ ಕಟ್ಟಡ ಕಾರ್ಮಿಕ ಸಂಘದ ರಾಜ್ಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top