ರಾಜ್ಯ ಸರ್ಕಾರ ಲುಕ್ ಔಟ್ ನೋಟಿಸ್‌ ಜಾರಿ

Picture of RB NEWS

RB NEWS

Bureau Report

ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಲುಕ್ ಔಟ್ ನೋಟಿಸ್‌ ಜಾರಿ ಮಾಡಿದೆ.

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಎಚ್.ಡಿ. ರೇವಣ್ಣಗೆ ವಿಶೇಷ ತನಿಖಾ ತಂಡ ನೋಟಿಸ್‌ ಜಾರಿ ಮಾಡಿತ್ತು. ನೋಟಿಸ್‌ ಗೆ ತಮ್ಮ ವಕೀಲರ ಮೂಲಕ ಉತ್ತರಿಸಿದ್ದ ಪ್ರಜ್ವಲ್ 7 ದಿನಗಳ ಕಾಲಾವಕಾಶ ಕೋರಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣಗೆ ಎಸ್‌ಐಟಿ ಲುಕ್ ಔಟ್ ನೋಟಿಸ್‌ ಜಾರಿ ಮಾಡಿದೆ.

ಪ್ರಜ್ವಲ್ ರೇವಣ್ಣ ಎಲ್ಲೇ ಕಂಡರೂ ಕೂಡಲೇ ವಶಕ್ಕೆ ಪಡೆಯುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದ್ದು, ವಿಶ್ವದ ಎಲ್ಲಾ ಏರ್‌ಪೋರ್ಟ್‌ಗಳಿಗೂ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಲಾಗಿದ್ದು, ವಿಶೇಷ ತನಿಖಾ ದಳ ಇಂಟರ್‌ಪೋಲ್‌ನ ಸಹಾಯ ಕೋರಿರುವುದಾಗಿ ವರದಿಯಾಗಿದೆ. ಮೇ 15 ಅಥವಾ 16ರಂದು ಪ್ರಜ್ವಲ್ ರೇವಣ್ಣ ಭಾರತಕ್ಕೆ ವಾಪಸ್ ಆಗಬಹುದು ಎಂದು ಹೇಳಲಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top