[t4b-ticker]

ರಾಯಭಾರಿಯಾಗಿ ಸವಿತಾ ಎರ್ಮಾಳ್

Picture of RB NEWS

RB NEWS

Bureau Report

ಉಡುಪಿ: ಬ್ರಹ್ಮಾವರ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಸವಿತಾ ಎರ್ಮಾಳ್ ಇವರನ್ನು “ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಓದಿಸಿ” (ಭೇಟಿ ಬಚಾವೊ ಭೇಟಿ ಪಡಾವೊ) ಮತ್ತು ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ತಂತ್ರವಿಧಾನಗಳ (ಲಿಂಗ ಆಯ್ಕೆಯ ನಿಷೇಧ) ಕಾಯ್ದೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದ ರಾಯಭಾರಿಯಾಗಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆಯ್ಕೆ ಮಾಡಿರುತ್ತಾರೆ.

ಶ್ರೀ ಜ್ಞಾನಶಕ್ತಿ ಸ್ಥಾನಿಕ ಬ್ರಾಹ್ಮಣ ಸಭಾ (ರಿ.) ಬ್ರಹ್ಮಾವರ ಇದರ ಕಾರ್ಯದರ್ಶಿ ಯಾಗಿರುವರು.

ಶ್ರೀ ಶಾಂಕರತತ್ವ ಪ್ರಸಾರ ಸಮಿತಿ ಉಡುಪಿ ಜಿಲ್ಲೆಯ ಸಹಸಂಚಾಲಕ ರಾಗಿರುವರು. ಬ್ರಹ್ಮಾವರದ ಸಮಿತಿಯ ಕಾರ್ಯದರ್ಶಿಯಾಗಿರುವರು. ಅಲ್ಲದೆ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಇದರ ರಾಷ್ಟ್ರೀಯ ಸೇವಾ ಯೋಜನಾ ಕೋಶ ಬೆಂಗಳೂರು ಇದರ ಮಂಗಳೂರು ವಿಭಾಗದ ವಿಭಾಗಾಧಿಕಾರಿಯಾಗಿ ನಿರ್ದೇಶಕರು ನಿಯೋಜಿಸಿ ರುವರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top