ರಾಷ್ಟ್ರಕ್ಕೆ ಪ್ರತಿಭಾವಂತರನ್ನು ಗುರುತಿಸುತ್ತಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆ

ಕಾರ್ಕಳ : ಜ್ಞಾನಸುಧಾ ಸಂಸ್ಥೆಗಳು ಜ್ಞಾನದ ಭಂಡಾರವಾಗಿದೆ. ಇಲ್ಲಿ ಶಿಕ್ಷಣ ಪಡೆದ ವಿಧ್ಯಾರ್ಥಿಗಳು ರಾಷ್ಟ್ರ, ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವುದು ಗಮನಾರ್ಹವಾಗಿದೆ ಎಂದು ಎಂ.ಆರ್.ಜಿ.ಗ್ರೂಪ್ಗಳ ಸಂಸ್ಥಾಪಕ, ಉದ್ಯಮಿ ಕೆ. ಪ್ರಕಾಶ್ ಶೆಟ್ಟಿ ಹೇಳಿದರು.
ಕಾರ್ಕಳ ಗಣಿತ ನಗರದ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಕ್ಯಾಂಪಸ್ನಲ್ಲಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಆಯೋಜಿಸಿದ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥಾಪಕರ ದಿನಾಚರಣೆಯನ್ನು ಉದ್ದೇಸಿಸಿ ಮಾತನಾಡಿದರು.
ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾಗಿರುವ ಸುಧಾಕರ ಶೆಟ್ಟಿ ಅವರು ಶಿಕ್ಷಣ ಕ್ರಾಂತಿಕಾರಿಯಾಗಿದ್ದಾರೆ. ತಾನು ಶ್ರಮ ಪಟ್ಟು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಪಿ, ಅರ್ಹ ಶಿಕ್ಷಕರನ್ನು ನಿಯೋಜಿಸಿದ್ದಾರೆ. ಅವರಿಂದ ವಿದ್ಯಾರ್ಥಿಗಳಿಗೆ ಪೂರಕ ಶಿಕ್ಷಣ ನೀಡಿವಲ್ಲಿ ಸಫಲರಾಗಿದ್ದಾರೆ. ಶಿಸ್ತು, ಬದ್ಧತೆ, ಸಂಯಮಗಳು ಕಾರಣವಾಗಿದೆ. ಆ ಮೂಲಕ ಶಿಕ್ಷಣದಲ್ಲಿ ಸಾಧಕರನ್ನು ಹೊರತರುವ ಯಶಸ್ಸು ಕಂಡಿದ್ದಾರೆ. ಅಂತಹ ಸಾಧನೆಯಿಂದಾಗಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ರಾಜ್ಯ ,ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.


ಶಿಕ್ಷಣವು ಪರಿಶ್ರಮದ ಮೂಲಕ ಸಾಧನೆಗೆ ಪ್ರೇರಣೆಯಾಗಬೇಕು. ದೈನಂದಿನ ಚಟುವಟಿಕೆಗಳನ್ನು ಆಯಾ ದಿನಗಳಲ್ಲಿ ಪೂರ್ಣಗೊಳಿಸುವ ಪರಿಪಾಠಕ್ಕೆ ಒತ್ತು ನೀಡಿದಾಗ ಸಮಾಜದಲ್ಲಿ ಉತ್ತಮ ವಿದ್ಯಾರ್ಥಿ ಎಂದು ಗುರುತಿಸಲು ಸಾಧ್ಯವಾಗುತ್ತದೆ ಎಂದು ಅಭಿಮತ ವ್ಯಕ್ತಪಡಿಸಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ತಾಂತ್ರಿಕ ಶಿಕ್ಷಣದ ನಿರ್ದೇಶಕ ಪ್ರಸನ್ನ ಹೆಚ್. ಐ.ಎ.ಎಸ್. ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗೆ ಸಮಯ ಪಾಲನೆಯೊಂದಿಗೆ ಸ್ಪರ್ಧೆ ಮುಖ್ಯವಾಗಿದೆ. ಇಂದಿನ ಸ್ಪರ್ಧಾತ್ಮಕ ಕಾಲದಲ್ಲಿ ರಾಜ್ಯದಲ್ಲಿ 1,000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ 4.5 ಲಕ್ಷ ಅಭ್ಯರ್ಥಿಗಳು ಅರ್ಜಿಸಲ್ಲಿಸಿದ್ದು, ಮೊದಲ ಹಂತದಲ್ಲಿ 45,000 ಅಭ್ಯರ್ಥಿಗಳು ಮಾತ್ರ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ . ಕಠಿಣ ಸ್ಪರ್ಧೆಗೆ ಪ್ರತಿಫಲ ಸಿಗುತ್ತದೆ ಎಂದರು.
ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ಮಾತನಾಡಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ರಾಜ್ಯದ ಅಸ್ತಿ ಎಂದರೂ ತಪ್ಪಾಗಲಾರದು. ಇಲ್ಲಿ ಕಲಿತ ವಿದ್ಯಾರ್ಥಿಗಳು ವೈದ್ಯಕೀಯ ರಂಗದಲ್ಲಿ ಸಾಧನೆಗೈಯುತ್ತಿರುವುದು ಗಮನಾರ್ಹವಾಗಿದೆ. ಸಂಸ್ಕಾರಯುತ ಶಿಕ್ಷಣವು ಕೆಲವೇ ಕೆಲ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಅವುಗಳ ಪಟ್ಟಿಯಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಅಗ್ರಪಂಕ್ತಿಯಲ್ಲಿ ಇರುವುದು ಗಮನಾರ್ಹವಾಗಿದೆ. ಇದು ದೇಶಕ್ಕೂ ಅಗತ್ಯವಾಗಿದೆ ಎಂದರು.
ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.
ಸಂಸ್ಥೆಯ ಪೂರ್ವ ವಿದ್ಯಾರ್ಥಿ ಐ.ಎಂಎಸ್. ಬನಾರಸ್ ,ವಾರಣಸಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಗೌತಮ್ಭಟ್ ಎಂ.ಬಿ.ಬಿ.ಎಸ್. ಎಂ.ಎಸ್. ಎಂ.ಸಿಹೆಚ್.( ಸರ್ಜಿಕಲ್ಆಂಕೋಲಜಿ) ಕಾಲೇಜಿನ ದಿನಗಳನ್ನು ಮೆಲುಕುಹಾಕಿದರು.
ಉಪನ್ಯಾಸಕಿ ಸಂಗೀತ ಕಾರ್ಯಕ್ರಮ ನಿರೂಪಿಸಿದರು.


ಇದೇ ಸಂದರ್ಭದಲ್ಲಿ 2024 ನೇ ಸಾಲಿನ ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆಇಇ ಅಡ್ವಾನ್ಸ್ಡ್ ಮೂಲಕ ಐ ಐ ಟಿ ಪ್ರವೇಶ ಪಡೆದ ಮೂವರು ವಿದ್ಯಾರ್ಥಿಗಳನ್ನು, ಜೆ.ಇ.ಇ ಮೈನ್ಸ್ ಮೂಲಕ ಎನ್.ಐ.ಟಿ ಪ್ರವೇಶ ಪಡೆದ ಎಂಟು ವಿದ್ಯಾರ್ಥಿಗಳನ್ನು, ನೀಟ್ ಮೂಲಕ ಎಂ.ಬಿ.ಬಿ.ಎಸ್. ಪ್ರವೇಶ ಗಳಿಸಿದ 155 ವಿದ್ಯಾರ್ಥಿಗಳನ್ನು, ಸಿ. ಎ. ಫೌಂಡೇಶನ್ನಲ್ಲಿ ತೇರ್ಗಡೆಗೊಂಡ ನಾಲ್ವರು ವಿದ್ಯಾರ್ಥಿಗಳನ್ನು, ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿದ ಸಂಸ್ಥೆಯ ಮೂವರು ವಿದ್ಯಾರ್ಥಿಗಳನ್ನು, ಹಾಗೂ ಕಳೆದ ಮೂರು ವರ್ಷಗಳಲ್ಲಿ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಹನ್ನೊಂದು ಪೂರ್ವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪ್ರತಿ ಎಂ.ಬಿ.ಬಿ.ಎಸ್ ಸೀಟ್ಗೆ (155) ರೂ. 2000 ದಂತೆ ಭಾರತೀಯ ಸೇನೆಗೆ ರೂ 3, 10,000 ವನ್ನು ದೇಣಿಗೆಯಾಗಿ ನೀಡಲಾಯಿತು.
ಒಟ್ಟು 3ನೇ ಹಂತದಲ್ಲಿ ಇದೀಗ ರೂ. 7,47,500 ವಿದ್ಯಾರ್ಥಿವೇತನವನ್ನು ವಿತರಿಸಿದರು.
.






































