ಕಾರ್ಕಳ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಪುಣ್ಯಸ್ಮರಣೆಯನ್ನು ಭಾವಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗಿಸುವ ಮೂಲಕ ಗೌರವ ನಮನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ಅವರು ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಕಾಂಗ್ರೆಸ್ ಮುಖಂಡ ಶೇಖರ್ ಮಡಿವಾಳ, ಕುಕ್ಕುಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ, ಉಪಾಧ್ಯಕ್ಷೆ ಶಶಿಕಲಾ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಪ್ರಭಾಕರ ಬಂಗೇರ, ಹಿಂದುಳಿದ ವರ್ಗ ಘಟಕದ ಅಧ್ಯಕ್ಷ ಅನಿಲ್ ಪೂಜಾರಿ ನೆಲ್ಲಿಗುಡ್ಡೆ, ಸೇವಾದಳದ ಅಧ್ಯಕ್ಷ ಅಬ್ದುಲ್ ಸಾಣೂರು, ಕೆಡಿಪಿ ಸದಸ್ಯೆ ರುಕ್ಮಯ ಶೆಟ್ಟಿಗಾರ್, ಗ್ಯಾರಂಟಿ ಸಮಿತಿ ಸದಸ್ಯ ಫಿಲಿಪ್ ಮಸ್ಕರೇನಸ್, ಹೇಮಂತ್ ಆಚಾರ್ಯ, ಯತೀಶ್ ಕಲ್ಯಾ, ಸಂತೋಷ್ ದೇವಾಡಿಗ, ಶೋಭಾ ಪ್ರಸಾದ್ ಸೇರಿದಂತೆ ಪಕ್ಷದ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು. ಮಹಾತ್ಮಾ ಗಾಂಧೀಜಿಯವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಂತ ಪ್ರಸ್ತುತವಾಗಿವೆ ಎಂದು ಈ ಸಂದರ್ಭದಲ್ಲಿ ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದರು.