ರಾಷ್ಟ್ರೀಯ ಯುವ ದಿನಾಚರಣೆ ಮಹತ್ವದು

Picture of RB NEWS

RB NEWS

Bureau Report

ಕಾರ್ಕಳ : ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಕಳ, ನ್ಯಾಯವಾದಿಗಳ ಸಂಘ (ರಿ.) ಕಾರ್ಕಳ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಾರ್ಕಳ ತಾಲೂಕು, ಮತ್ತು ಸರಕಾರಿ ಪ್ರೌಢಶಾಲೆ ಹಿರ್ಗಾನ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಉಚಿತ ಕಾನೂನು ಅರಿವು ಮಾಹಿತಿ ಕಾರ್ಯಕ್ರಮವು ಹಿರ್ಗಾನ ಸರಕಾರಿ ಪ್ರೌಢಶಾಲೆಯಲ್ಲಿ ಜರಗಿತು.

ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಕಳ ನ್ಯಾಯವಾದಿಗಳ ಸಂಘ (ರಿ.) ಇದರ ಅಧ್ಯಕ್ಷ ಸುನೀಲ್ ಕುಮಾರ್ ಶೆಟ್ಟಿ ಮಾತನಾಡಿ, ಸ್ವಾಮಿ ವಿವೇಕಾನಂದರ ತತ್ವಾದರ್ಶಗಳು ಹಿಂದೂ ಧರ್ಮದ ಪುನರುತ್ಥಾನಕ್ಕೆ ನಾಂದಿ ಹಾಡಿತು. ಅವರ ಜನ್ಮದಿನವನ್ನು ನಾವು ರಾಷ್ಟ್ರೀಯ ಯುವ ದಿನಾಚರಣೆಯನ್ನಾಗಿ ಆಚರಿಸುತ್ತಿದ್ದೇವೆ ಎಂದು ತಿಳಿಸಿದರು.

ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ವಿವೇಕಾನಂದರು ತನ್ನ ತತ್ವಗಳ ಮೂಲಕ ವಿಶ್ವಮಾನವ ಸಂದೇಶವನ್ನು ಸಾರಿದರು ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಕಾರ್ಕಳದ ನ್ಯಾಯವಾದಿ ಸುರೇಶ ಪೂಜಾರಿ, ವಿಶ್ವ ಯುವ ದಿನಾಚರಣೆಯ ಬಗ್ಗೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ಪೋಕ್ಸ ಕಾಯ್ದೆ, ಜನನ ಪ್ರಮಾಣ ಪತ್ರದ ಬಗ್ಗೆ ಮಕ್ಕಳಿಗಾಗುವ ಲೈಂಕಿಕ ದೌರ್ಜನ್ಯದ ಬಗ್ಗೆ ಮಕ್ಕಳಿಂದಲೇ ಪ್ರಾತ್ಯಕ್ಷಿತಾ ರೂಪದಲ್ಲಿ ವಿವರಿಸಿ ಮಾಹಿತಿಯನ್ನು ನೀಡಿದರು.
ಹಿರ್ಗಾನ ಸರಕಾರಿ ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಶಂಕರ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು.

ಹಿರಿಯ ಶಿಕ್ಷಕಿ ಶಾಲಿನಿ ಮೆಂಡನ್ ಉಪಸ್ಥಿತರಿದ್ದರು.

ಶಿಕ್ಷಕಿ ಪವಿತ್ರ ಸ್ವಾಗತಿಸಿದರು. ಶಿಕ್ಷಕಿ ಪ್ರಿಯ ಕುಮಾರಿ ವಂದನಾರ್ಪಣೆಗೈದರು. ಸತೀಶ್ ಅಡಿಗ ನಿರೂಪಿಸಿದರು

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top