ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ

Picture of RB NEWS

RB NEWS

Bureau Report

ಕಾರ್ಕಳ : ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಕಳ, ನ್ಯಾಯವಾದಿಗಳ ಸಂಘ (ರಿ.), ಕಾರ್ಕಳ, ಇವರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆಯ ಸಲುವಾಗಿ, ಸ್ವಚ್ಛತಾ ಕಾರ್ಯಕ್ರಮವು ಕಾರ್ಕಳ ನ್ಯಾಯಾಲಯದ ಆವರಣದಲ್ಲಿ ಏರ್ಪಡಿಸಲಾಯಿತು.

ಹಿರಿಯ ಸಿವಿಲ್ ಮತ್ತು ಎ.ಸಿ.ಜೆ.ಎಂ. ನ್ಯಾಯಾಧೀಶರು ಹಾಗೂ ಅಧ್ಯಕ್ಷರು ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಕಳ ಶರ್ಮಿಳಾ, ಸಿ.ಎಸ್. ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಕಳ ಕೋಮಲ ಆರ್.ಸಿ. ನ್ಯಾಯವಾದಿಗಳ ಸಂಘ (ರಿ.) ಕಾರ್ಕಳ ಇದರ ಅಧ್ಯಕ್ಷ ಸುನೀಲ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ಹರೀಶ್ ಅಧಿಕಾರಿ, ಕಾರ್ಯದರ್ಶಿ ಅನಿಲ್ ಕುಮಾರ್ ನಿಟ್ಟೆ, ಕಾರ್ಕಳದ ನ್ಯಾಯವಾದಿಗಳು, ನ್ಯಾಯಾಲಯದ ಸಿಬ್ಬಂಧಿ ಉಪಸ್ಥಿತರಿದ್ದರು.‌

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top