ರೀಲ್ಸ್ ನಲ್ಲಿ ತಲವಾರು ಝಳಪಿಸಿದ : ಪೊಲೀಸ್ ಠಾಣೆಯಲ್ಲಿ ಕ್ಷಮೆಯಾಚಿಸಿದ !

Picture of RB NEWS

RB NEWS

Bureau Report

ಮಂಗಳೂರು: ತಲ್ವಾರ್ ಝಳಪಿಸುತ್ತಾ ನರ್ತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಆರೋಪಿಗಳನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.‌

ನಗರದ ಬಂದರು ಜೆ.ಎಂ. ರೋಡ್ ನಿವಾಸಿ ಅಮೀರ್ ಸುಹೇಲ್ (28) ಮತ್ತು ಕಾವೂರು ಪಂಜಿಮೊಗರು ಉರುಂದಾಡಿ ಗುಡ್ಡೆ ನಿವಾಸಿ ಸುರೇಶ (29) ಬಂಧಿತ ಆರೋಪಿಗಳು.

ಆರೋಪಿಗಳು ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪದಡಿ ಇಬ್ಬರು ಆರೋಪಿಗಳು ಬಂಧನಕ್ಕೆ ಒಳಗಾಗಿದ್ದಾರೆ.

“Suresh Psy” ಎಂಬ ಹೆಸರಿನ ಫೇಸ್ ಬುಕ್ ಖಾತೆ ಹೊಂದಿರುವ ಸುರೇಶ ಡಿ.13ರಂದು ತನ್ನ ಫೇಸ್ ಬುಕ್ ಖಾತೆಯಲ್ಲಿಅಮೀರ್ ಸುಹೇಲನು ತಲ್ವಾರ್ ಹಿಡಿದು ಹಾಡಿಗೆ ಡ್ಯಾನ್ಸ್‌ ಮಾಡಿದ ವೀಡಿಯೋದ ಮೇಲೆ ವೈಲ್ಸ್ ಮತ್ತು ಬಿಳಿ ಬಣ್ಣದ ಹೃದಯದ ಗುರುತಿನ ಚಿಹ್ನೆಯೊಂದಿಗೆ ಸ್ಟೋರಿ ಹಾಕಿದ್ದನು.

ಸಾಮಾಜಿಕ ಜಾಲತಾಣ ಪರಿಶೀಲನೆ ವೇಳೆ ಇದನ್ನು ಗಮನಿಸಿದ ಪೊಲೀಸರು, ಸಾಮಾಜಿಕ ಜಾಲತಾಣದ ಮೂಲಕ ಸಾರ್ವಜನಿಕರಿಗೆ ಭಯ ಹುಟ್ಟಿಸುವ ಕೆಲಸ ಮಾಡಿದ ಅಮೀರ್ ಸುಹೇಲ್ ಹಾಗೂ ಸುರೇಶನ ವಿರುದ್ಧ ಕಾವೂರು ಪೊಲೀಸ್‌ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ 2023 ಜತೆಗೆ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಕಲಂ 4.25(1ಬಿ) ಹಾಗೂ ಐ.ಟಿ. ಕಾಯ್ದೆ 66 ರಂತೆ ಪ್ರಕರಣ ದಾಖಲಿಸಿದ್ದರು.

ಆರೋಪಿಗಳನ್ನು ಬಂಧಿಸಿ ರೀಲ್ಸ್ ಮಾಡಲು ಬಳಸಿದ ತಲ್ವಾರ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲು ಬಳಸಿದ ಮೊಬೈಲ್ ಫೋನ್ ಗಳನ್ನು ಜಪ್ತಿ ಮಾಡಲಾಗಿದೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು ಎಂದು ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top