ಕಾರ್ಕಳ : ರೋಟರಿ ಕ್ಲಬ್ ಕಾರ್ಕಳ ರೋಟರಕ್ಟ್ ಕ್ಲಬ್ ಕಾರ್ಕಳ ಆನ್ಸ್ ಕ್ಲಬ್ ಇದರ ಸಂಯುಕ್ತ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯನ್ನು ನಡೆಸ ಲಾಯಿತು.
ಮುಖ್ಯ ಅತಿಥಿಗಳಾಗಿ ರಾಷ್ಟ್ರಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕ ಜಾರ್ಜ್ ಕಾಸ್ಟಾಲಿನೊ ಭಾಗವಹಿಸಿದ್ದರು .
ಈ ಕಾರ್ಯಕ್ರಮದಲ್ಲಿ ಮುದ್ದುಕೃಷ್ಣ ಸ್ಪರ್ಧೆ ವಿಜೇತರಿಗೆ ಹಾಗೂ ಚಿತ್ರಕಲಾ ಸ್ಪರ್ಧಾ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಜ್ಯೋತಿ ನಾಯಕ್ ರುಮೈಜ ಹಾಗೂ ಶಕೀಲಾ ಇವರುಗಳನ್ನು ಶಿಕ್ಷಕರ ದಿನಾಚರಣೆ ಪ್ರಯುಕ್ತ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ರೋಟರಿ ಅಧ್ಯಕ್ಷ ಇಕ್ಬಾಲ್ ಅಹಮದ್ ರೋಟಾ ರಕ್ಟ್ ಅಧ್ಯಕ್ಷ ಸುನಿಲ್ ನಾಯಕ್ ಜಿಲ್ಲಾ ಪ್ರತಿನಿಧಿ ಚೇತನ್ ಆನ್ಸ್ ಕ್ಲಬ್ ಅಧ್ಯಕ್ಷ ವಿನಯ ಶೆಟ್ಟಿ ರೋಟರಿ ಕಾರ್ಯದರ್ಶಿ ಗಣೇಶ್ ಸಾಲಿಯಾನ್ ಉಪಸ್ಥಿತರಿದ್ದರು.

ರೋ ಟರಿ ಕ್ಲಬ್ ಕಾರ್ಕಳ ಇದರ ಆಶ್ರಯದಲ್ಲಿ ಕಾರ್ಕಳ ವೃತ್ತ ಹಾಗೂ ಬೆಳ್ಮಣ್ ವೃತ್ತದ ಮುಖ್ಯ ಶಿಕ್ಷಕರಿಗೆ ತರಬೇತಿ ಕಾರ್ಯಗಾರವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಬಿಟ್ಟು ಹಾಗೂ ನಂದಳಿಕೆ ಹಿರಿಯ ಪ್ರಾಥಮಿಕ ಶಾಲೆ ಬೆಳ್ಮಣ್ ನಲ್ಲಿ ಜರುಗಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೊಂಡಳ್ಳಿ ಪ್ರಭಾಕರ ಶೆಟ್ಟಿ ಹಾಗೂ ಜೇಸಿ ರಾಷ್ಟ್ರೀಯ ತರಬೇತುದಾರ ಸುಧಾಕರ ಪೂಜಾರಿ ಅವರು ತರಬೇತಿ ಕಾರ್ಯಗಾರವನ್ನು ನಡೆಸಿಕೊಟ್ಟರು.
ವೇದಿಕೆಯಲ್ಲಿ ಕಾರ್ಕಳ ತಾಲೂಕು ಶಿಕ್ಷಣಾಧಿಕಾರಿ ಉಮೇಶ್ ರೋಟರಿ ಅಧ್ಯಕ್ಷ ಇಕ್ಬಾಲ್ ಅಹಮದ್ ಗಣೇಶ್ ಸಾಲಿಯಾನ್ ನಿಯೋಜಿತ್ ಅಧ್ಯಕ್ಷ ನವೀನ್ ಶೆಟ್ಟಿ ಹಾಗೂ ಶಿಕ್ಷಕರ ಕ್ಷೇತ್ರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

































