
ರೌಡಿಶೀಟರ್ ಕೊಲೆ : ಕೃತ್ಯಕ್ಕೆ ಬಳಸಿದ ಕಾರು ವಶ

ಮಂಗಳೂರು : ತೊಕ್ಕೊಟ್ಟು ಫ್ಲೈಓವರ್ ಮೇಲೆ ಬೆಳ್ಳಂಬೆಳಗ್ಗೆ ನಡೆದ ರೌಡಿಶೀಟರ್ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಲಭ್ಯವಾಗಿದೆ. ಕೃತ್ಯಕ್ಕೆ ಬಳಸಲಾಗಿದ್ದ ಕಾರು ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿ ಎಂಬಲ್ಲಿ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.






































