ರೌಡಿಶೀಟರ್ ಗಳ ಗಡಿಪಾರು ಅದೇಶ

Picture of RB NEWS

RB NEWS

Bureau Report

ಉಡುಪಿ : ಜಿಲ್ಲೆಯಲ್ಲಿ ಇಬ್ಬರು ಆರೋಪಿಗಳಿಗೆ ಗಡಿಪಾರು ಆದೇಶ ಜಾರಿಗೊಳಿಸಿರುವ ಘಟನೆ ನಡೆದಿದೆ.
ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮಹಮ್ಮದ್ ನೌಫಿಲ್ ಹಾಗೂ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಹಾನ್ ಪೂಜಾರಿ ವಿರುದ್ಧ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಮಾರ್ಚ್ 26ರಂದು ಈ ಆದೇಶ ಹೊರಡಿಸಿದ್ದಾರೆ.

ಮಹಮ್ಮದ್ ನೌಫಿಲ್ ವಿರುದ್ಧ ಒಟ್ಟು 5 ಪ್ರಕರಣಗಳು ದಾಖಲಾಗಿದ್ದು, ಆತನ ಮೇಲೆ ರೌಡಿ ಶೀಟ್ ಕೂಡ ತೆರೆಯಲಾಗಿದೆ. ಇನ್ನು ಸುಹಾನ್ ಪೂಜಾರಿ ವಿರುದ್ಧ 4 ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದೆ.

ಆದೇಶದಂತೆ, ಮಹಮ್ಮದ್ ನೌಫಿಲ್ ನನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವ ಪೊಲೀಸ್ ಠಾಣಾ ವ್ಯಾಪ್ತಿಗೆ ಹಾಗೂ ಸುಹಾನ್ ಪೂಜಾರಿಯನ್ನು ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

ಈ ಸಂಬಂಧ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top