ಲಾಡಿ : ಹಸಿರು ವಾಣಿ ಹೊರೆ ಕಾಣಿಕೆ ಮೆರವಣಿಗೆ
ವರದಿ : ರಾಯಿ ರಾಜಕುಮಾರ ಮೂಡುಬಿದಿರೆ
ಮೂಡುಬಿದಿರೆ : ಲಾಡಿ ಚತುರ್ಮುಖ ಬ್ರಹ್ಮ ದೇವಸ್ಥಾನದ ಶ್ರೀ ಗಣಪತಿ ಹಾಗೂ ನಾಡುವಿನ ಬಿಂಬಗಳ ಜೊತೆ ಹಸಿರು ವಾಣಿ ಹೊರೆ ಕಾಣಿಕೆ ಮೆರವಣಿಗೆ ಸ್ವರಾಜ್ಯ ಮೈದಾನದಿಂದ ಮೂಡುಬಿದಿರೆ ಪೇಟೆಯಲ್ಲಿ ಸಾಗಿ ಲಾಡಿ ದೇವಾಲಯದ ತನಕ ಸಾಗಿಬಂತು.


ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎಂ.ಕೆ.ರಾವ್ ನೇತೃತ್ವದಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಜೀರ್ಣೋದ್ಧಾರ ಸಮಿತಿಯ ಸದಸ್ಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

































