ವಿಟ್ಲ: ಲಾರಿಗಳಿಂದ ಬ್ಯಾಟರಿ ಕಳ್ಳತನ ಮಾಡುತ್ತಿದ್ದ ಸರಣಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಕಾಸರಗೋಡು ಚರ್ಕಳ ನಿವಾಸಿ ಅಬ್ದುಲ್ ಶಮೀರ್ ಪಿ.ಎ. (50) ಹಾಗೂ ಕಾಸರಗೋಡು ಮುಟ್ಟತೋಡಿ ನಿವಾಸಿ ಅಬ್ದುಲ್ ಮಜಿದ್ (33) ಎಂದು ಗುರುತಿಸಲಾಗಿದೆ.
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ನಿಲ್ಲಿಸಿದ್ದ ಲಾರಿಗಳ ಬ್ಯಾಟರಿಗಳನ್ನು ಕಳ್ಳತನ ಮಾಡುತ್ತಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಕ್ರ ಸಂಖ್ಯೆ 38/2025, 39/2026, 41/2026, 123/2026 ಹಾಗೂ 126/2026 ಸೇರಿದಂತೆ ಒಟ್ಟು ಐದು ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಸೂಕ್ತ ಮಾಹಿತಿಯ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ ಕಳ್ಳತನ ಮಾಡಲಾಗಿದ್ದ 10 ಲಾರಿ ಬ್ಯಾಟರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಳಿಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಈ ಪ್ರಕರಣದ ಯಶಸ್ವಿ ಭೇದನೆಯ ಮೂಲಕ ವಿಟ್ಲ ಪೊಲೀಸರು ಕಳ್ಳತನ ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ತಮ್ಮ ಕಾರ್ಯಕ್ಷಮತೆಯನ್ನು ಮತ್ತೊಮ್ಮೆ ತೋರಿಸಿದ್ದಾರೆ