ಲೋಕಾಯುಕ್ತರ ಬಲೆಗೆ ಸಿಕ್ಕ ಲಂಚಕೋರರು!

Picture of RB NEWS

RB NEWS

Bureau Report

ಲೋಕಾಯುಕ್ತರ ಬಲೆಗೆ ಸಿಕ್ಕ ಲಂಚಕೋರರು!

ಬ್ರಹ್ಮಾವರ : ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಉಳ್ಳೂರು ಗ್ರಾಮ ಪಂಚಾಯತ್ ಪಿಡಿಓ ಹಾಗೂ ಬಿಲ್ ಕಲೆಕ್ಟರ್‌ನನ್ನು ಉಡುಪಿ ಲೋಕಾಯುಕ್ತ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಉಳ್ಳೂರು ಗ್ರಾಪಂ ಪಿಡಿಓ ಇನಾಯತುಲ್ಲಾ ಬೇಗ್ ಹಾಗೂ ಬಿಲ್‌ ಕಲೆಕ್ಟ‌ರ್ ಸಂಜಯ್ ಬಂಧಿತ ಆರೋಪಿಗಳು. ಇವರು ರವಿ ಡಿಲಿಮಾ ಎಂಬವರಲ್ಲಿ ‘9 ಆ್ಯಂಡ್ 11’ ಕೆಲಸಕ್ಕಾಗಿ 13,300ರೂ. ಲಂಚದ ಬೇಡಿಕೆಯೊಡ್ಡಿದ್ದರು. ಆದರೆ ಲಂಚ ನೀಡಲು ಒಪ್ಪದ ರವಿ ಈ ಬಗ್ಗೆ ಉಡುಪಿ ಲೋಕಾಯುಕ್ತರಿಗೆ ದೂರು ನೀಡಿದ್ದರು.

ಅದರಂತೆ ಲೋಕಾಯುಕ್ತ ಪೊಲೀಸರು ಪ್ರಕರಣದ ದಾಖಲಿಸಿಕೊಂಡಿದ್ದರು. ಈ ಸಂಬಂಧ ರವಿ ಡಿಲಿಮಾ ಅವರಿಂದ 13,300ರೂ. ಲಂಚ ಸ್ವೀಕರಿಸುತ್ತಿದ್ದ ಪಿಡಿಓ ಇನಾಯತ್ ಉಲ್ಲಾ ಬೇಗ್ ಹಾಗೂ ಸಂಜಯ್‌ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಲೋಕಾಯುಕ್ತ ಎಸ್ಪಿ ನಟರಾಜ್ ಮಾರ್ಗದರ್ಶನದಲ್ಲಿ ಡಿ.ವೈ.ಎಸ್.ಪಿ ಕೆ.ಸಿ.ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್‌ ನಿರೀಕ್ಷಕ ಮಂಜುನಾಥ್ ಹಾಗೂ ರಫೀಕ್ ಮತ್ತು ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ಪುಷ್ಪವತಿ, ರೋಹಿತ್, ಸತೀಶ್ ಹಂದಾಡಿ, ಮಲ್ಲಿಕಾ ಪ್ರಸನ್ನ ದೇವಾಡಿಗ, ಅಬ್ದುಲ್ ಜಲಾಲ್, ರವೀಂದ್ರ ಗಾಣಿಗ, ರಮೇಶ್, ಸೂರಜ್, ಸತೀಶ್ ಆಚಾರ್ಯ,ಸುಧೀರ್, ರಾಘವೇಂದ್ರ ಪೂಜಾರಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top