ಮೂಡುಬಿದಿರೆ: ಕಾಂಗ್ರೆಸ್ ಸರ್ಕಾರದ ವಕ್ಫ್ ಅಕ್ರಮ ಮತ್ತು ಲ್ಯಾಂಡ್ ಜಿಹಾದ್ ವಿರೋಧಿಸಿ ಕಿನ್ನಿಗೋಳಿಯ ಸುಖಾನಂದ ಶೆಟ್ಟಿ ವೃತ್ತದಲ್ಲಿ ಭಾರತೀಯ ಜನತಾ ಪಾರ್ಟಿಯ ಮುಲ್ಕಿ ಮೂಡುಬಿದಿರೆ ಕ್ಷೇತ್ರದ ಎಲ್ಲಾ ಮಂಡಲದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಜರಿದ್ದು ಪ್ರತಿಭಟನೆಯನ್ನು ನಡೆಸಿದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಸರಕಾರದ ಅಕ್ರಮಗಳ ಸರಮಾಲೆಗಳನ್ನು ಜನರ ಸಮಕ್ಷಮದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ತೆರೆದಿಟ್ಟರು.
ಮುಖಂಡರುಗಳಾದ ಕಸ್ತೂರಿ ಪಂಜ, ಭುವನಾಭಿರಾಮ ಉಡುಪ, ಜಗದೀಶ್ ಅಧಿಕಾರಿ ಹಾಗೂ ಇತರರು ಹಾಜರಿದ್ದರು.





















