ವಾಯುಭಾರ ಕುಸಿತ – ಭಾರಿ ಗಾಳಿ ಮಳೆ ಸಾಧ್ಯತೆ

Picture of RB NEWS

RB NEWS

Bureau Report







ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿರುತ್ತಾರೆ.


ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರುಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸಬೇಕು.


ಪ್ರವಾಸಿಗರು, ಸಾರ್ವಜನಿಕರು, ಮೀನುಗಾರರು ನದಿ, ಜಲಪಾತ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು.
ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು.
ದುರ್ಬಲವಾದ , ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ ಹಾಗೂ ಮರಗಳ ಕೆಳಗೆ ನಿಲ್ಲಬಾರದು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top