[t4b-ticker]

ವಾಹನ ಕಳ್ಳರು ಧರ್ಮಸ್ಥಳ ಪೊಲೀಸರ ಬಲೆಗೆ

Picture of RB NEWS

RB NEWS

Bureau Report

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಹನ ಕಳ್ಳತನ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಹಾಸನ ಜಿಲ್ಲೆಯ ಹೊಸ ಲೈನ್ ರಸ್ತೆ ನಿವಾಸಿ ನಂದನ ಗೌಡ ಕೆ.ಡಿ (21), ಹೇಮಾವತಿ ಆಸ್ಪತ್ರೆ ಬಳಿ ನಿವಾಸಿ ಹೇಮಂತ್ (20) ಹಾಗೂ ಹರ್ಷಿತ್ ಕುಮಾರ್ (19) ಎಂದು ಗುರುತಿಸಲಾಗಿದೆ.


ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫೆ.24ರಂದು ಮೂರು ಬೈಕ್ ಗಳು ಹಾಗೂ ಮಾ.1ರಂದು ಕೊಕ್ಕಡದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರು ಕಳುವಾಗಿತ್ತು. ಬಳಿಕ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದ್ದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಳುವಾಗಿದ್ದ ಮೂರು ಬೈಕ್ ಗಳನ್ನು ಹಾಗೂ ಮಾರುತಿ ಕಾರನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ತನಿಖೆ ಮುಂದುವರೆದಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top