ವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ

Picture of RB NEWS

RB NEWS

Bureau Report


ಉಡುಪಿ: ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್ ನಕಲಿ ಅಲ್ಲ. ಎನ್‌ಕೌಂಟರ್ ನಕಲಿ ಎಂದು ಅನುಮಾನ ಪಡುವುದು ಬೇಡ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ.

    ಉಡುಪಿಯ ಗೃಹ ಕಚೇರಿಯಲ್ಲಿ ಶನಿವಾರ ಮಾತನಾಡಿದ ಸಚಿವರು, ಎನ್ ಕೌಂಟರ್ ಕುರಿತು ನ್ಯಾಯಾಂಗ ತನಿಖೆಯ ಅವಶ್ಯಕತೆ ಇಲ್ಲ. ಅಗತ್ಯವಿದ್ದರೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.


    ವಿಕ್ರಮ್ ಗೌಡ ವಿರುದ್ಧ ಹಲವು ಪ್ರಕರಣಗಳು ಇದ್ದವು. ನಕ್ಸಲೇಟ್ ಗಳನ್ನು ಕಟ್ಟಿ ಹಾಕಬೇಕು ಎಂಬುದು ಸರ್ಕಾರದ ನಿರ್ಧಾರ. ಕೂಂಬಿಂಗ್ ಮಾಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಿಕ್ರಂ ಗೌಡ ಬಳಿ ಕೂಡ ಶಸ್ತ್ರಾಸ್ತ್ರಗಳು ಇದ್ದವು. ವಿಕ್ರಂ ಗೌಡ ಒಂದು ಬಾರಿ ಫೈರಿಂಗ್ ಮಾಡಿದ್ದರಿಂದ ಪ್ರತಿ ದಾಳಿ ಮಾಡದಿದ್ದರೆ ಪೊಲೀಸರ ಜೀವಕ್ಕೆ ಹಾನಿ ಆಗುತ್ತಿತ್ತು ಎಂದರು.

    ನಕ್ಸಲೈಟನ್ನು ಬೇರು ಸಮೇತ ಕಿತ್ತು ಹಾಕಬೇಕು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಿಲುವು. ಪರ ವಿರೋಧ ಚರ್ಚೆ ಎಲ್ಲಾ ಸಂದರ್ಭದಲ್ಲಿ ಇರುತ್ತದೆ. ಸರ್ಕಾರ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿದೆ. ಸಂಶಯ ಇದ್ದವರಿಗೆ ನಾವು ಮತ್ತೆ ಸ್ಪಷ್ಟನೆ ಕೊಡಲು ತಯಾರಿದ್ದೇವೆ ಎಂದು ಹೇಳಿದರು.

    ವಿಕಲ ಚೇತನರಿಗೆ ಅನುದಾನ ಕಡಿತ ಇಲ್ಲ
    ವಿಕಲಾಂಗ ಚೇತನ ಹಾಗೂ ಹಿರಿಯ ನಾಗರೀಕ ಇಲಾಖೆಯ ಅನುದಾನ ಕಡಿತ ಮಾಡಲಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ಇಲಾಖೆ 32 ಸಾವಿರ ಕೋಟಿಗಿಂತ ಹೆಚ್ಚಿನ ಗಾತ್ರದ ಬಜೆಟ್ ಹೊಂದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಾಂಗ ಚೇತನ ಯಾವುದೇ ಅನುದಾನವನ್ನು ನಾವು ಕಡಿತ ಮಾಡುವುದಿಲ್ಲ ಎಂದರು.

    ಬಳ್ಳಾರಿಗೆ ಭೇಟಿ ಕೊಟ್ಟಿಲ್ಲ ಎಂದರೆ, ಈ ಪ್ರಕರಣವನ್ನು ಹಗುರವಾಗಿ ಪರಿಗಣಿಸಿದ್ದೇವೆ ಎಂದಲ್ಲ.‌ ಸರ್ಕಾರಕ್ಕೆ ಮತ್ತು ಮಂತ್ರಿಗಳಿಗೆ ಬಹಳ ಜವಾಬ್ದಾರಿ ಇದೆ. ತಪ್ಪಿತಸ್ಥರ ವಿರುದ್ಧ ಸ್ಥಳದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

    ಕಳಪೆ ಆಹಾರ ಪೂರೈಸಿದರೆ ಕ್ರಮ
    ರಾಜ್ಯದಲ್ಲಿ ಅಂಗನವಾಡಿಗೆ 50 ವರ್ಷದ ಇತಿಹಾಸವಿದೆ.‌ 70 ಸಾವಿರ ಅಂಗನವಾಡಿಯಲ್ಲಿ 35 ಲಕ್ಷ ಮಕ್ಕಳ ಪಾಲನೆ ಮಾಡಲಾಗುತ್ತದೆ. ಅಂಗನವಾಡಿಗಳಲ್ಲಿ ಕಳಪೆ ಅಕ್ಕಿ ವಿತರಣೆ, ಆಹಾರ ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದರು

    ಈ ರೀತಿಯ ಇನ್ನಷ್ಟು ಸುದ್ದಿಗಳು

    error: Content is protected !!
    Scroll to Top