ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕದ ಮಾಹಿತಿ

Picture of RB NEWS

RB NEWS

Bureau Report

ಬಂಟ್ವಾಳ: ರಾಯಿ ಸರಕಾರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕ ಹಾಗೂ ಕನ್ನಡ ಮಾಧ್ಯಮದ ಸಾಧಕಗಳ ಕುರಿತು ಮಾಹಿತಿ ನೀಡಲಾಯಿತು.

ಬೆಂಗಳೂರು ಸೂರ್ಯ ಫೌಂಡೇಶನ್ ಹಾಗೂ ಸ್ಪಾರ್ಕ್ ಅಕಾಡೆಮಿಯ ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಮೂಡುಬಿದಿರೆ ಅವರು ಮಾಹಿತಿದಾರರಾಗಿ ಆಗಮಿಸಿದ್ದರು.

ಅವರು ತಮ್ಮ ಭಾಷಣದಲ್ಲಿ ಗ್ರಾಮೀಣ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗೆ ಸರಕಾರವು ಅತ್ಯುತ್ತಮವಾದಂತಹ ಸೌಲಭ್ಯವನ್ನು ಒದಗಿಸಿಕೊಡುತ್ತಿದ್ದು ಉಚಿತವಾಗಿ ದೊರಕುವ ಎಲ್ಲಾ ಸವಲತ್ತುಗಳೊಂದಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗದ ಸಂದರ್ಭದಲ್ಲಿ ಕನ್ನಡ ಮಾಧ್ಯಮಕ್ಕೆ ಮತ್ತು ಗ್ರಾಮೀಣ ಶಿಕ್ಷಣಕ್ಕೆ ಕೃಪಾಂಕ ನೀಡಿ ಪ್ರೋತ್ಸಾಹಿಸುತ್ತಿದೆ. ಸರಕಾರ ನೀಡುತ್ತಿರುವ ಈ ಎಲ್ಲ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ತಮ್ಮ ಬದುಕನ್ನು ಬೆಳಗಿಸಿಕೊಳ್ಳಬೇಕೆಂದು ಹಲವಾರು ಉದಾಹರಣೆಗಳನ್ನು ನೀಡಿ ಮನವಿ ಮಾಡಿಕೊಂಡರು.

ಮುಖ್ಯ ಶಿಕ್ಷಕಿ ತನುಜ ಸ್ವಾಗತಿಸಿದರು. ಬಾಬಿ ವಂದಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top