ವಿದ್ಯುತ್ ಅಘಾತಕ್ಕೆ ಲೈನ್ ಮ್ಯಾನ್ ವಿಧಿವಶ
ಬೈಂದೂರು: ವಿದ್ಯುತ್ ದುರಸ್ಥಿ ಕಾರ್ಯ ನಿರ್ವಹಿಸುತ್ತಿದ್ದ ಲೈನ್ಮ್ಯಾನ್ ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಬೈಂದೂರಿನ ತಗ್ಗರ್ಸೆ ಹೆಗ್ಗೇರಿಯಲ್ಲಿ ಸೋಮವಾರ ನಡೆದಿದೆ.
ಮೂಲತಃ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ನಿವಾಸಿ ಸಲೀಮ್(38) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.
ಕಳೆದ ಎಂಟು ವರ್ಷಗಳಿಂದ ಲೈನ್ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಹೆಗ್ಗೇರಿಯಲ್ಲಿ ವಿದ್ಯುತ್ ಟ್ರಾನ್ಸ್ಫಾರ್ಮರ್ ಬಳಿ ವಿದ್ಯುತ್ ಸಂಪರ್ಕ ದುರಸ್ತಿ ಮಾಡುತ್ತಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದ್ದು ಸಲೀಮ್ ಮೃತಪಟ್ಡಿದ್ದಾರೆ.
ವಿವಾಹಿತರಾಗಿರುವ ಸಲೀಂ ಇವರಿಗೆ ಎರಡು ತಿಂಗಳ ಮಗು ಇದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






































