ವಿದ್ಯುತ್ ಅಘಾತಕ್ಕೊಳಗಾಗಿ ಮಹಿಳೆ ಸಾವು:ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯನ ವಿರುದ್ಧ ಪ್ರಕರಣ ದಾಖಲು
RB NEWS
Bureau Report
ವಿದ್ಯುತ್ ಅಘಾತಕ್ಕೊಳಗಾಗಿ ಮಹಿಳೆ ಸಾವು: ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯನ ವಿರುದ್ಧ ಪ್ರಕರಣ ದಾಖಲು
ಕಾರ್ಕಳ: ನಿಟ್ಟೆ ವಿದ್ಯುತ್ ಅಘಾತಕ್ಕೊಳಗಾಗಿ ಮಹಿಳೆಯೊಬ್ಬರು ದಾರುಣ ರೀತಿಯಲ್ಲಿ ಮೃತಪಟ್ಟ ಪ್ರಕರಣಕ್ಕೆ ಸಂಬAಧಿಸಿದAತೆ ನಿಟ್ಟೆ ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯ ಲತೇಶ್ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಟ್ಟೆ ಪರಪ್ಪಾಡಿ ಬೋಂಟ್ರ ಮನೆಯಲ್ಲಿ ಲಲಿತಾ(೫೮) ಎಂಬವರು ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದರು. ಅವರ ಸಹೋದರ ರಾಘು ಬೋಂಟ್ರ ಅವರ ಉತ್ತರಕ್ರಿಯೆ ನಡೆಯಬೇಕಾದ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯ ಲತೇಶ್ ಎಂಬವರಿಗೆ ಲೈಟಿಂಗ್ ಮತ್ತು ಶಾಮಿಯಾನ ಅಳವಡಿಸುವ ಕೆಲಸ ನೀಡಿದ್ದರು. ತಿಥಿಕಾರ್ಯದ ಪೂರ್ವ ಭಾಗವಾಗಿ ಅಡುಗೆ ಪಾತ್ರೆ ತೊಳೆಯುತ್ತಿದ್ದ ಸಂದರ್ಭದಲ್ಲಿ ಶಾಮಿಯಾನದ ಕಬ್ಬಿಣದ ಕಂಬವನ್ನು ಮುಟ್ಟಿದ ಸಂದರ್ಭ ವಿದ್ಯುತ್ ಪ್ರವಹಿಸಿದ ಪರಿಣಾಮ ಈ ಘಟನೆ ನಡೆದಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.