ವಿಧಾನ ಪರಿಷತ್‌ ಸದಸ್ಯೆ ತೇಜಸ್ವಿನಿ ಗೌಡ ರಾಜಿನಾಮೆ

Picture of RB NEWS

RB NEWS

Bureau Report

ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಮಾಜಿ ಪತ್ರಕರ್ತೆ, ವಿಧಾನ ಪರಿಷತ್‌ ಸದಸ್ಯೆ ತೇಜಸ್ವಿನಿ ಗೌಡ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ತೇಜಸ್ವಿನಿ ಗೌಡ ಅವರು ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಸಭಾಪತಿಗಳು ಇವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಧಾನ ಪರಿಷತ್‌ ಸ್ಥಾನಕ್ಕೆ ಸ್ವ ಇಚ್ಚೆಯಿಂದ ರಾಜೀನಾಮೆ ನೀಡಿದ್ದೇನೆ ಎಂದು ತೇಜಸ್ವಿನಿ ತಿಳಿಸಿದ್ದಾರೆ. ಪರಿಷತ್ ಸದಸ್ಯರಾಗಿ ಇವರ ಅವಧಿ ಇದೇ ಜೂನ್ ವರೆಗೆ ಇತ್ತು. ಇದೀಗ ಅವಧಿಗೂ ಮುನ್ನವೇ ತೇಜಸ್ವಿನಿ ಗೌಡ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top