ಉಡುಪಿ : ಶ್ರೀರಾಮ ಜನ್ಮಭೂಮಿ ಅಯೋಧ್ಯೆಯ ನೂತನ ಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ಹಾಗೂ ಮಂಡಲ ಪರ್ಯಂತ ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ಶಾಸ್ತ್ರೋಕ್ತವನ್ನು ಪೇಜಾವರ ಮಠದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ನೆರವೇರಿಸಿದರು.
ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಅಭಿನಂದನಾ ಸಮಾರಂಭ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರಮಪೂಜ್ಯ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಅಧ್ಯಕ್ಷತೆಯಲ್ಲಿ ಹಾಗೂ ಪರಮಪೂಜ್ಯ ಪುತ್ತಿಗೆ ಕಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನೆರವೇರಿತು








































