ಶವಗಳನ್ನು ಹೂತು ಹಾಕಿದ ಅನಾಮಿಕ ವ್ಯಕ್ತಿ ನ್ಯಾಯಾಲಯಕ್ಕೆ ಹಾಜರು !

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಕ್ಕೂ ಅಧಿಕ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.
ಧರ್ಮಸ್ಥಳ ಗ್ರಾಮದಲ್ಲಿ ಹಲವು ಮೃತದೇಹಗಳನ್ನು ಹೂತುಹಾಕಿದ್ದೆ. ಈ ಹಿಂದೆ ಜೀವ ಬೆದರಿಕೆಯಿಂದ ಈ ಕೃತ್ಯ ಎಸಗಿದ್ದೆ. ಆದರೆ ಈಗ ಪಾಪಪ್ರಜ್ಞೆ ಕಾಡಿದೆ. ಆದ್ದರಿಂದ ಸಾಕ್ಷಿ ನೀಡಲು ಮುಂದಾಗಿದ್ದೇನೆ ಎಂದು ಕಾರ್ಮಿಕ ಆಗಿದ್ದ ವ್ಯಕ್ತಿಯೊಬ್ಬರು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯವರಿಗೆ ದೂರನ್ನು ಸಲ್ಲಿಸಿದ್ದರು.
ಈ ಹಿಂದೆಯೇ ಹಲವು ಅಪರಾಧ ಕೃತ್ಯಗಳು ನಡೆದಿದೆ. ಜೀವ ಬೆದರಿಕೆಯಿಂದ ತಾನು ಮೃತದೇಹಗಳ ವಿಲೇವಾರಿ ಮಾಡಿದ್ದೆ. ಆದರೆ ಈಗ ಪಾಪಪ್ರಜ್ಞೆ ಕಾಡುತ್ತಿದೆ. ಕಾನೂನು ರಕ್ಷಣೆ ದೊರೆತರೆ ವಿಲೇವಾರಿ ಮಾಡಿದ ಮೃತದೇಹಗಳನ್ನು ತೋರಿಸುವುದಾಗಿ ವ್ಯಕ್ತಿ ಹೇಳಿದ್ದರು.
ಈ ಸಂಬಂಧ ಎಫ್ಐಆರ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.





































