ಶಾಲಾ ವಿದ್ಯಾರ್ಥಿಗಳಿಗೆ ಸ್ವಚ್ಛ ಪರಿಸರ ಅಗತ್ಯ
ಮೂಡುಬಿದಿರೆ : ಗಂಟಾಲ್ಕಟ್ಟೆಯ ಉರ್ಪೆಲ್ ಪಾದೆ ಸರಕಾರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ನವೆಂಬರ್ 29 ರಂದು ಸ್ವಚ್ಛ ಪರಿಸರದ ಅಗತ್ಯ ಹಾಗೂ ಪ್ಲಾಸ್ಟಿಕ್ ಮುಕ್ತ ಪರಿಸರದಿಂದ ಆಗುವ ಲಾಭಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು.
ಬೆಂಗಳೂರು ಸೂರ್ಯ ಫೌಂಡೇಶನ್ ನ ಜಿಲ್ಲಾ ಸಂಯೋಜಕ, ಸ್ಪಾರ್ಕ್ ಅಕಾಡೆಮಿಯ ತರಬೇತುದಾರ ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಮೂಡುಬಿದಿರೆ ಯವರು ಮಾಹಿತಿಯನ್ನು ನೀಡಿದರು.
ಗ್ರಾಮೀಣ ಪ್ರದೇಶದ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವುದರಿಂದ ಆಗುವ ಲಾಭಗಳ ಬಗ್ಗೆ ಕೂಡಾ ಮಾಹಿತಿಯನ್ನು ನೀಡಿದರು.
ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು. ಮುಖ್ಯ ಶಿಕ್ಷಕಿ ಪ್ರಮೀಳಾ ಪಿಂಟೋ ಸ್ವಾಗತಿಸಿದರು. ಶಿಕ್ಷಕಿ ಸುಮಾ ಕೆ. ವಂದಿಸಿದರು.

- ವ್ಯಾಪಾರಿ ಕಂಪನಿಗಳ ಬ್ರಾಂಡ್ ರಂಗೋಲಿ ಚಿತ್ತಾರ






































