ಶಾಸಕ ವಿ.ಸುನೀಲ್ ಕುಮಾರ್ ರವರ ಸಹೋದರ ನಿಧನ
ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ನೆಕ್ಲಾಜೆಗುತ್ತು ಸುಜೀತ್ ಕುಮಾರ್ (53) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು 15 ದಿನಗಳ ಹಿಂದೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೇ 23 ರಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಮೃತರು ತಂದೆ,ತಾಯಿ ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.






































