ಕಾರ್ಕಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕುಜೆ ವಯೋನಿವೃತ್ತಿಯನ್ನು ಹೊಂದಿರುವ ಮೀರಾ ಹಾಗೂ ವರ್ಗಾವಣೆಗೊಂಡು ಮುದ್ರಾಡಿ ಶಾಲೆಗೆ ಹೋಗಿರುವ ಸತೀಶ್ ನಾಯ್ಕ ಬೆಳಿಂಜೆ ರವರಿಗೆ ಅಭಿನಂದನಾ ಕಾರ್ಯಕ್ರಮವು ಎಸ್.ಡಿ.ಎಂ.ಸಿ. ಅಧ್ಯಕ್ಷ ರವೀಂದ್ರ ನಾಯ್ಕರವರ ಅಧ್ಯಕ್ಷತೆಯಲ್ಲಿ ಜರುಗಿತು.

ಶಾಲಾ ಮುಖ್ಯೋಪಾಧ್ಯಾಯ ದಯಾನಂದ ನಾಯಕ್ ಸ್ವಾಗತಿಸಿದರು. ಶಿಕ್ಷಕಿ ರಂಜಿತಾ ಪ್ರಾಸ್ತಾವಿಕ ಮಾತುಗಳಾನ್ನಾಡಿದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಾಮನ್ ಭಟ್, ಕಡ್ತಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಲಕ್ಷ್ಮಿ, ಲಕ್ಷ್ಮಿ ಜನಾರ್ಧನ ಯಕ್ಷಗಾನ ಕಲಾಸಂಘದ ಅಧ್ಯಕ್ಷ ಹರೀಶ್ ಪೂಜಾರಿ ದುಗ್ಗನ್ ಬೆಟ್ಟು, ಲಯನ್ ಸಂಪತ್ ಕುಮಾರ್, ನಿವೃತ್ತ ಮುಖ್ಯ ಶಿಕ್ಷಕರಾದ ಮಹಾಬಲ ನಾಯ್ಕ, ಅಶೋಕ್ ಕುಮಾರ್ ಸ್ಟುಡಿಯೋ ಮತ್ತಿತರರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಹಾಗೂ ಹಳೆ ವಿದ್ಯಾರ್ಥಿಗಳು ಇಬ್ಬರು ಶಿಕ್ಷಕರ ಪರವಾಗಿ ತಮ್ಮ ಅನಿಸಿಕೆಯನ್ನು ತಿಳಿಸಿದರು.
ದೈಹಿಕ ಶಿಕ್ಷಣ ಶಿಕ್ಷಕರಾದ ಶಂಕರ್ ನಾಯ್ಕ ಕಾರ್ಯಕ್ರಮ ನಿರೂಪಿಸಿದರು, ಹಿರಿಯ ಶಿಕ್ಷಕಿ ಶ್ರೀಮತಿ ಯಶೋಧ ಹೆಗ್ಡೆ ವಂದನಾರ್ಪಣೆಗೈದರು ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು,ಹಳೆ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.





































