ಕಾರ್ಕಳ ತಾಲೂಕು ಭಂಡಾರಿ ಮಹಿಳಾ ಸಂಘದ ವತಿಯಿಂದ ಮಹಿಳಾ ದಿನಾಚರಣೆ
ಕಾರ್ಕಳ : ಶಿಕ್ಷಣ ಪಡೆಯುವ ಮೂಲಕ ಸಮಾಜದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಸ್ವಾವಲಂಬಿಯಾಗಿ ಬದುಕುವಷ್ಟರ ಮಟ್ಟಿಗೆ ಬದಲಾಗಿದ್ದಾಳೆ ಎಂದು ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಮಿತ್ರ ಪ್ರಭಾ ಹೆಗ್ಡೆ ಹೇಳಿದರು.
ಕಾಬೆಟ್ಟು ಸುಜಾತ ಯೋಗಿಶ್ ಭಂಡಾರಿ ಯವರ ನಿವಾಸದಲ್ಲಿ ಭಂಡಾರಿ ಸಮಾಜದ ವತಿಯಿಂದ ಆಯೋಜಿಸಲಾದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹಿಂದಿನ ಕಾಲದಲ್ಲಿ ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರ ಸ್ಥಿತಿ ಗತಿ ಹೇಗಿತ್ತು, ಯಾವೆಲ್ಲ ಕಟ್ಟು ಪಾಡುಗಳು ,ಬವಣೆಗಳನ್ನು ಅನುಭವಿಸುತ್ತಿದ್ದಳು ಎಂಬುವುದಾಗಿ ವಿವರಿಸಿದರು.
ಇದೇ ಸಂದರ್ಭದಲ್ಲಿ 16 ವರ್ಷಗಳ ಕಾಲ ಅಂಗನವಾಡಿ ಸಹಾಯಕಿಯಾಗಿ ಸೇವೆ ಸಲ್ಲಿಸುತ್ತಿರುವ ವಸಂತಿ ಭಂಡಾರಿ ನಕ್ರೆ ಹಾಗೂ ಅಂಗವೈಕಲ್ಯವನ್ನು ಮೆಟ್ಟಿ ನಿಂತ ಮಾಲಿನಿ ಭಂಡಾರಿ ಇವರನ್ನು ಸನ್ಮಾನಿಸಲಾಯಿತು.


























