ಶಿರೂರು ಗುಡ್ಡಕುಸಿತ ದುರಂತ: ಚಾಲಕ ಅರ್ಜುನ್ ಮೃತದೇಹ ಹಾಗೂ ಲಾರಿ ಪತ್ತೆ

Picture of RB NEWS

RB NEWS

Bureau Report

ಕಾರವಾರ : ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಸಂಭವಿಸಿದ್ದ ಗುಡ್ಡಕುಸಿತ ದುರಂತದಲ್ಲಿ ನಾಪತ್ತೆಯಾಗಿದ್ದ ಲಾರಿ ಚಾಲಕ ಅರ್ಜುನ್ ಮೃತದೇಹ ಹಾಗೂ ಲಾರಿ ಇಂದು ಪತ್ತೆಯಾಗಿದೆ.

ಭೂಕುಸಿತ ಸಂಭವಿಸಿದ ದಿನ ಮೃತ ಅರ್ಜುನ್ ಅವರು ಟ್ರಕ್‌ನಲ್ಲಿ ಮರ ತುಂಬಿಸಿಕೊಂಡು ಕಲ್ಲಿಕೋಟೆಯ ಕಡೆಗೆ ತೆರಳುತ್ತಿದ್ದರು. ಈ ಅವಘಡದಲ್ಲಿ ನಾಪತ್ತೆಯಾಗಿದ್ದ ಅರ್ಜುನ್ ಮೃತದೇಹ ಇದೀಗ ಪತ್ತೆಯಾಗಿದೆ.

ಕಳೆದ ಆರು ದಿನಗಳಿಂದ ಬಾರ್ಜ್ ಮೂಲಕ ನದಿಯಲ್ಲಿ ಲಾರಿ ಹಾಗೂ ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಇಂದು ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿರುವ ವೇಳೆ ಅರ್ಜುನ್ ಅವರ ಶವ ಹಾಗೂ ಅವರು ಚಲಾಯಿಸುತ್ತಿದ್ದ ಕೇರಳ ಮೂಲದ ಲಾರಿ ಪತ್ತೆಯಾಗಿದೆ. ಪತ್ತೆಯಾಗಿರುವ ಈ ಲಾರಿಯು ಸಂಪೂರ್ಣ ನಜ್ಜುಗುಜ್ಜಾಗಿದೆ.

ಸದ್ಯ ಲಾರಿಯನ್ನು ಬಾರ್ಜ್‌ನಲ್ಲಿರುವ ಕ್ರೇನ್ ಮೂಲಕ ಮೇಲಕ್ಕೆ ಎತ್ತಿದ್ದು ಲಾರಿ ಮುಂಭಾಗ ಹಾಗೂ ಚಾಲಕನ ಮೃತದೇಹ ಗೋಚರವಾಗಿದೆ.

ಜುಲೈ 16 ರಂದು ಶಿರೂರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದ್ದ ಭೀಕರ ಗುಡ್ಡ ಕುಸಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. ಅವರ ಪೈಕಿ ಎಂಟು ಮಂದಿಯ ಮೃತದೇಹಗಳು ಪತ್ತೆಯಾಗಿದ್ದವು. ಸ್ಥಳೀಯರಾದ ಜಗನ್ನಾಥ ನಾಯ್ಕ, ಲೋಕೇಶ ನಾಯ್ಕ ಹಾಗೂ ಕೇರಳ ಮೂಲದ ಅರ್ಜುನ್ ಮೃತದೇಹ ಪತ್ತೆಯಾಗಿರಲಿಲ್ಲ. ಇದೀಗ ಅರ್ಜುನ್ ಶವ ಪತ್ತೆಯಾಗಿದ್ದು, ಇನ್ನಿಬ್ಬರ ಮೃತದೇಹಗಳು ಪತ್ತೆಯಾಗಬೇಕಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top