“ಕೈ”ಕೊಟ್ಟು “ಬಿಲ್ಲುಬಾಣ” ಹಿಡಿದ ಗೋವಿಂದ
ಮುಂಬಯಿ: ಕಾಂಗ್ರೆಸ್ ಪಕ್ಷ ತೊರೆದ ಹಿರಿಯ ಬಾಲಿವುಡ್ ನಟ, ಮಾಜಿ ಸಂಸದ ಗೋವಿಂದ ಅವರು ಮುಖ್ಯಮಂತ್ರಿ ಏಕನಾಥ್ ಶಿಂಧೆ ಶಿವಸೇನೆ (ಏಕನಾಥ್ ಶಿಂಧೆ ಬಣ) ಸೇರ್ಪಡೆಗೊಂಡಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೋವಿಂದಾ ಅವರು ಮುಂಬೈ ವಾಯುವ್ಯ ಕ್ಷೇತ್ರದಿಂದ ಶಿವಸೇನೆ ಟಿಕೆಟ್ ಪಡೆದು ಸ್ಪರ್ಧಿಸುವುದು ಬಹುತೇಕ ಖಚಿತಗೊಂಡಿದೆ.

2004ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಗೋವಿಂದ ಬಿಜೆಪಿಯ ಹಿರಿಯ ನಾಯಕ ರಾಮ್ ನಾಯಕ್ ಅವರನ್ನು ಸೋಲಿಸಿದ್ದರು.2024ರ ಲೋಕಸಭಾ ಚುನಾವಣೆಯಲ್ಲಿ ಶಿವಸೇನೆಯಿಂದ (ಏಕನಾಥ ಶಿಂಧೆ ಬಣ) ಸ್ವರ್ಧಿಸಲಿದ್ದಾರೆ.
ಗೋವಿಂದ ಸೇರ್ಪಡೆಯಾದ ಬಳಿಕ ಶಿವಸೇನೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.






































