ಶೈಕ್ಷಣಿಕ ಕ್ಷೇತ್ರ ಇನ್ನಷ್ಟು ಪ್ರಗತಿ ಹೊಂದಲಿ

Picture of RB NEWS

RB NEWS

Bureau Report

ಶೈಕ್ಷಣಿಕ ಕ್ಷೇತ್ರ ಇನ್ನಷ್ಟು ಪ್ರಗತಿ ಹೊಂದಲಿ

ಮೂಡುಬಿದಿರೆ : ಶೈಕ್ಷಣಿಕ ಕ್ಷೇತ್ರವು ಗಣನೀಯವಾಗಿ ಬೆಳೆಯುವಲ್ಲಿ ಸಂಘ-ಸಂಸ್ಥೆಗಳ ಪ್ರೋತ್ಸಾಹ, ಸಹಕಾರ ಅಗತ್ಯವಾಗಿದೆ ಎಂದು ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತನ್ನ ಶಾಸಕ ಅವಧಿಯಲ್ಲಿ ಶಾಲಾ ಮಕ್ಕಳಿಗಾಗಿ ನೀಡಿರುವಂತಹ ಅದೆಷ್ಟೋ ಕೊಡುಗೆಗಳು ಹಾಗೂ ಸರಕಾರಿ ಶಾಲೆ ಮಾಡಿರುವಂತಹ ಸಾಧನೆಗಳು ಇಡೀ ಕ್ಷೇತ್ರಕ್ಕೆ ಹೆಸರು ತರುವಂತದ್ದು ಎಂದು ಮಕ್ಕಳನ್ನು ಅಭಿನಂದಿಸಿದರು.

ಸಾಮಾಜಿಕ ಹೋರಾಟಗಾರ್ತಿ ರಮಿತಾ ಶೈಲೇಂದ್ರ ಮಾತನಾಡಿ, ಮಕ್ಕಳಿಗೆ ವಿದ್ಯೆಯೊಂದಿಗೆ ಧಾರ್ಮಿಕ ಶಿಕ್ಷಣ ನೀಡುವುದು ಅತ್ಯಗತ್ಯ. ಆ ಮೂಲಕ ಭಾರತೀಯ ಸಂಸ್ಕಾರ- ಸಂಸ್ಕೃತಿ ಆಚಾರ ವಿಚಾರಗಳನ್ನು ಮುಂದಿನ ಪೀಳಿಗೆಗೆ ತಿಳಿಯಪಡಿಸುವಲ್ಲಿ ಪ್ರಯೋಜನವಾಗಲಿದೆ ಎಂದರು.

ಶಾಲಾ ಮುಖ್ಯೋಪಾಧ್ಯಾಯ ಕರುಣಾಕರ ದೇವಾಡಿಗ ಸ್ವಾಗತಿಸಿದರು ಸಹ ಶಿಕ್ಷಕ ಅರುಣ್ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಕರಾವಳಿ ಕೇಸರಿ ಸೇವಾ ಟ್ರಸ್ಟ್ ರಿ. ಬೆದ್ರ ಸ್ಥಾಪಕ ಅಧ್ಯಕ್ಷ ಸಮಿತ್ ರಾಜ್ ದರೆಗುಡ್ಡೆ ಪಂಚಾಯತ್ ಅಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು, ಪಂಚಾಯತ್ ಉಪಾಧ್ಯಕ್ಷೆ ನಳಿನಿ ಹರೀಶ್ ಪಂಚಾಯತ್ ಸದಸ್ಯರಾದ ಪ್ರಸಾದ್ ಬಿ ಪೂಜಾರಿ ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top