ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ 21 ವಿದ್ಯಾರ್ಥಿಗಳಿಗೆ MET ಪರೀಕ್ಷೆಯಲ್ಲಿ ಅರ್ಹತೆ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್( ಮಾಹೆ) ಇದರ ಪ್ರತಿಷ್ಠಿತ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (MIT)ವಿವಿಧ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆದ MET ಪರೀಕ್ಷೆಯಲ್ಲಿ ಕಾರ್ಕಳದ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ 21 ವಿದ್ಯಾರ್ಥಿಗಳು SAGES ನ ಯೋಜನೆಯಡಿಯಲ್ಲಿ ಅರ್ಹತೆಯನ್ನು ಪಡೆದು ಈ ಎಲ್ಲಾ ವಿಭಾಗಗಳ ಸಂಬಂಧಪಟ್ಟ ಕೋರ್ಸ್ ಗಳಲ್ಲಿ ಶೇಕಡಾ 75% ಶುಲ್ಕ ವಿನಾಯತಿಯನ್ನು ಪಡೆಯಲಿದ್ದಾರೆ.
ಶ್ರೀ ಭುವನೇಂದ್ರ ಸಂಸ್ಥೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಈ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸುವ ಮೂಲಕ ಗುಣಾತ್ಮಕ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಉಪನ್ಯಾಸ ಮತ್ತು ಉಪನ್ಯಾಸಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.


























