ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜು : ಸಾಧನೆಗೈದ ವಿದ್ಯಾರ್ಥಿಗಳು
ಕಾರ್ಕಳ : ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಅನ್ನಪೂರ್ಣ ಕಾಮತ್ ವಾಣಿಜ್ಯ ವಿಭಾಗದಲ್ಲಿ ಏಳನೇ ರ್ಯಾಂಕ್ ಮತ್ತು ಕೀರ್ತನ ವಿಜ್ಞಾನ ವಿಭಾಗದಲ್ಲಿ 10ನೇ ರ್ಯಾಂಕ್ ಪಡೆದಿದ್ದಾರೆ.
2024 25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಪಲಿತಾಂಶ ಇಂದು ಪ್ರಕಟಗೊಂಡಿದ್ದು ಕಾರ್ಕಳದ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಅನ್ನಪೂರ್ಣ ಕಾಮತ್ 593 ಅಂಕದೊಂದಿಗೆ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಮತ್ತು ಕೀರ್ತನ 590 ಅಂಕದೊಂದಿಗೆ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 10ನೇ ಸ್ಥಾನವನ್ನು ಪಡೆದಿರುತ್ತಾರೆ.
ಇವರ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಅಧ್ಯಾಪಕೇತರ ವೃಂದದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.





































