ಸಂಘಕ್ಕೆ ಭರ್ಜರಿ ಕೊಡುಗೆ: ಸ್ವಂತ ಕಟ್ಟಡಕ್ಕೆ ಶಿಲಾನ್ಯಾಸಕ್ಕೆ ಘೋಷಣೆ

Picture of RB NEWS

RB NEWS

Bureau Report


ಶಿರ್ತಾಡಿ: ಸಂಘದ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಕೊಡುಗೆಯಾಗಿ ಈಗಾಗಲೇ ಪೀಠೋಪಕರಣಗಳಿಗಾಗಿ 5 ಲಕ್ಷ ರೂ. ಅನುದಾನ ನೀಡಲಾಗಿದ್ದು, ಸಂಘವು ಶೀಘ್ರದಲ್ಲೇ ಸ್ವಂತ ಕಟ್ಟಡವನ್ನು ಹೊಂದಬೇಕೆಂದು ಗಣ್ಯರು ಆಶಯ ವ್ಯಕ್ತಪಡಿಸಿದರು. ಬರುವ ಗಣರಾಜ್ಯೋತ್ಸವದಂದು ಸ್ವಂತ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಲಿದ್ದು, ಆ ಸಂದರ್ಭದಲ್ಲಿ ಬ್ಯಾಂಕ್ ವತಿಯಿಂದ 10 ಲಕ್ಷ ರೂ. ಆರ್ಥಿಕ ಸಹಾಯ ನೀಡಲಾಗುವುದಾಗಿ ಘೋಷಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಚಿವ ಅಭಯಚಂದ್ರ ಜೈನ್ ವಹಿಸಿದ್ದರು. ಸಂಘದ ವಿವಿಧ ಸೇವೆಗಳಿಗೆ ಗಣ್ಯರು ಚಾಲನೆ ನೀಡಿದರು. ಪಡಿತರ ವಿಭಾಗವನ್ನು ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಭಾಸ್ಕರ್ ಎಸ್. ಕೋಟ್ಯಾನ್ ಉದ್ಘಾಟಿಸಿದರು. ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್ ಠೇವಣಿ ಪತ್ರವನ್ನು ಬಿಡುಗಡೆಗೊಳಿಸಿದರು. ಎಂಸಿಎಸ್‌ ಸೊಸೈಟಿ ಅಧ್ಯಕ್ಷ ಬಾಹುಬಲಿ ಪ್ರಸಾದ್ ಉಳಿತಾಯ ಖಾತೆ ಪುಸ್ತಕವನ್ನು ಹಸ್ತಾಂತರಿಸಿದರು. ಸಿಇಒ ಚಂದ್ರಶೇಖರ್ ಎಂ. ಸ್ವಸಹಾಯ ಸಂಘದ ಪುಸ್ತಕವನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಸಹಕಾರಿ ರಂಗದ ಸಾಧಕ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಶಿರ್ತಾಡಿ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಅವರನ್ನು ಸಂಪತ್ ಸಾಮ್ರಾಜ್ಯ ಅವರು ಗೌರವಿಸಿ ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ನವಮೈತ್ರಿ ಸಂಘದ ಅಧ್ಯಕ್ಷ ಸತೀಶ್ ಶೆಟ್ಟಿ, ಹೊಸಬೆಟ್ಟು ಸಹಕಾರ ಸಂಘದ ಅಧ್ಯಕ್ಷ ರಾಜೇಶ್, ಪೆರಾಡಿ ಸಿ.ಎ. ಬ್ಯಾಂಕ್ ಅಧ್ಯಕ್ಷ ಸತೀಶ್ ಕಾಶಿಪಟ್ಟ, ನೆಲ್ಲಿಕಾರು ಸಹಕಾರಿ ಸಂಘದ ಅಧ್ಯಕ್ಷ ಜಯವರ್ಮ ಜೈನ್, ಶಿರ್ತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಗ್ನೆಸ್ ಡಿಸೋಜಾ, ಉಪಾಧ್ಯಕ್ಷ ಸಂತೋಷ್ ಕೋಟ್ಯಾನ್, ಸಂಘದ ಉಪಾಧ್ಯಕ್ಷ ಚಿಂತನ್ ಲೋಬೊ, ಸಿಇಒ ವಿಮಲಾಜಿ, ಸಂಘದ ನಿರ್ದೇಶಕರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರಾಮ್ ಕುಮಾರ್ ಮಾರ್ನಾಡ್ ನಿರೂಪಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top