ಸಂತ್ರಸ್ತ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ರಾಜ್ಯ ಸರ್ಕಾರ ಮಾಡಲಿದೆ : ಮುಖ್ಯಮಂತ್ರಿ ಸಿದ್ಧರಾಮಯ್ಯ
ಬೆಂಗಳೂರು : ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ.
ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ.
ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲೆಂದು ಮುಖಮಂತ್ರಿ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.



ಭಯೋತ್ಪಾದಕರ ಈ ಹೇಯ ಕೃತ್ಯದಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಹಲವು ಕನ್ನಡಿಗರು ಕೂಡ ಸಾವನ್ನಪ್ಪಿರುವುದು ಅತ್ಯಂತ ದುಃಖದ ವಿಚಾರ.
ಉಗ್ರಕೃತ್ಯದಿಂದಾಗಿ ದೂರದ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯದ ಅಧಿಕಾರಿಗಳ ತಂಡವನ್ನು ಸಂಜೆಯೇ ರವಾನಿಸಲಾಗಿದೆ.
ಈ ಸಂದರ್ಭದಲ್ಲಿ ನಮ್ಮ ಸರ್ಕಾರದಿಂದ ಹೆಚ್ಚಿನ ನೆರವಿನ ಅಗತ್ಯ ಇದೆ ಎನ್ನುವುದನ್ನು ಅರಿತು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಗೆ ಕಾಶ್ಮೀರಕ್ಕೆ ತೆರಳಿ ಇಡೀ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸುವಂತೆ ಸೂಚನೆ ನೀಡಿದ್ದೇನೆ.
ಸಂತ್ರಸ್ತ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ನಮ್ಮ ಸರ್ಕಾರ ಮಾಡಲಿದೆ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧ ರಾಮಯ್ಯ ತಿಳಿಸಿದ್ದಾರೆ.


























