ಸಂವಿಧಾನವು ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದೆ -ನ್ಯಾಯಾಧೀಶ ಎ. ಸಮಿಯುಲ್ಲಾ
ಕಾರ್ಕಳ : ಸಂವಿಧಾನವು ನಮಗೆ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದೆ ನಾವು ಹಕ್ಕನ್ನು ಮಾತ್ರ ಪ್ರದಿಪಾದಿಸದೆ ಕರ್ತವ್ಯಗಳನ್ನು ಸಹ ಈಡೇರಿಸಬೇಕೆಂದು
ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಉಡುಪಿ ಸಂಚಾರಿ ಪೀಠ ಕಾರ್ಕಳ ಎ. ಸಮಿಯುಲ್ಲಾ ಹೇಳಿದರು.
ಕಾರ್ಕಳ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಕಳ, ನ್ಯಾಯವಾದಿಗಳ ಸಂಘ (ರಿ.) ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ದಿನಾಚರಣೆಯ ಸಲುವಾಗಿ ಉಚಿತ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಮಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಹಿರಿಯ ನ್ಯಾಯವಾದಿ ಎಂ.ಕೆ. ವಿಜಯಕುಮಾರ್, ಸ್ವಾತಂತ್ರ್ಯ ಪೂರ್ವದ ಮತ್ತು ಸ್ವಾತಂತ್ರ್ಯದ ನಂತರ ಸಂವಿಧಾನದಲ್ಲಿ ಆದ ಬದಲಾವಣೆಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿ ಭಾರತದ ಸಂವಿಧಾನದ ಪ್ರಕಾರ ಪ್ರಜೆಗಳೇ ದೇಶದ ಪ್ರಭುಗಳು ಎಂದು ತಿಳಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ನ್ಯಾಯವಾದಿಗಳ ಸಂಘದ ಅಧ್ಯಕ್ಷರ ಸುನಿಲ್ ಕುಮಾರ್ ಶೆಟ್ಟಿ ಅವರು ಸಂವಿಧಾನದಪ್ರಕಾರ ನಾವು ಹೇಗೆ ನಮ್ಮ ಹಕ್ಕನ್ನು ಪಡೆಯುತ್ತೇವೆಯೋ, ಅದೇ ರೀತಿ ಕರ್ತವ್ಯವನ್ನು ಪೂರೈಸಬೇಕೆಂದು ಎಂದರು.































