ಸಂವಿಧಾನ ಪದೇ ಪದೇ ತಿದ್ದುಪಡಿಯಿಂದ ಸಂವಿಧಾನ ಶಿಲ್ಪಿಗೆ ಅವಮಾನ : ಮಣಿರಾಜ್ ಶೆಟ್ಟಿ
ಕಾರ್ಕಳ : ಸಂವಿಧಾನದ ಪುಸ್ತಕ ಹಿಡಿದು ಸಂಸತ್ ಕಲಾಪದಲ್ಲಿ ಭಾಗವಹಿಸಿದ ಕಾಂಗ್ರೆಸ್ಸಿನ ನಾಯಕರುಗಳಿಗೆ ಸಂವಿಧಾನದಲ್ಲಿ ಎಷ್ಟು ಪರಿಚ್ಛೇದಗಳಿವೆ ಗೊತ್ತಿದೆ. ಕೇವಲ ಮತಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಸ್ ಅಂಬೇಡ್ಕರ್ ಹೆಸರು ಬಳಸುತ್ತಿದ್ದು, ಅವರಿಗೆ ಯಾವುದೇ ಗೌರವ ನೀಡಿಲ್ಲ. ಷಹಭಾನು ಕೇಸ್ ನಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಸಂವಿಧಾನ ತಿದ್ದುಪಡಿಯ ಮೂಲಕ ಅನೂರ್ಜಿತಗೊಳಿಸಲಾಯಿತು. ಅಂಬೇಡ್ಕರ್ ಸಂಸತ್ ಪ್ರವೇಶಿಸಲು ಕಾಂಗ್ರೆಸ್ ಅಡ್ಡಗಾಲು ಹಾಕಿತ್ತು. ಪದೇ ಪದೇ ಸಂವಿಧಾನ ತಿದ್ದುಪಡಿಯಿಂದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರನ್ನು ಅಗೌರವಿಸಲಾಗಿದೆ ಎಂದು ಬಿಜೆಪಿ ಮುಖಂಡ ಮಣಿರಾಜ್ ಶೆಟ್ಟಿ ಆರೋಪಿಸಿದ್ದಾರೆ.
ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಅಲ್ಪಸಂಖ್ಯಾತ ಮುಸ್ಲಿಮ್ ಸಮುದಾಯಕ್ಕೆ ಸರ್ಕಾರಿ ಗುತ್ತಿಗೆಯಲ್ಲಿ ಶೇಕಡಾ 4 ಮೀಸಲಾತಿ ನೀಡಿದ್ದನ್ನು ಸಮರ್ಥಿಸುತ್ತಾ ಅಗತ್ಯ ಬಿದ್ದರೆ ಸಂವಿಧಾನ ಬದಲಿಸಬೇಕಾಗಬಹುದು ಎಂಬ ನೀಡಿರುವ ಹೇಳಿಕೆಯನ್ನು ಖಂಡಿಸಿ ಕಾರ್ಕಳ ತಾಲೂಕು ಕಚೇರಿ ಸರ್ಕಲ್ ಬಳಿ ಅಂಬೇಡ್ಕರ್ ಪ್ರತಿಮೆಯ ಮುಂಭಾಗ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನೆ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕಾರ್ಕಳ ಬಿಜೆಪಿಯ ಮಂಡಲಾದ್ಯಕ್ಷ ನವೀನ್ ನಾಯಕ್ ಮಾತನಾಡಿ, ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯಬೇಕಾದವರಿಂದ ಸಂವಿಧಾನಕ್ಕೆ ಅಪಮಾನವಾಗಿದೆ ಎಂದರು.

ಭಾರತೀಯ ಜನತಾಪಾರ್ಟಿಯ ವಕ್ತಾರ ರವೀಂದ್ರ ಮೊಯ್ಲಿ ಮಾತನಾಡಿ, ಸಂವಿಧಾನದ ಅಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಉಪಮುಖ್ಯಮಂತ್ರಿಯವರಿಂದ ಇಂತಹ ಹೇಳಿಕೆ ನಿರೀಕ್ಷಿಸಿರಲಿಲ್ಲ. 1952 ರ ಬಳುಕ ಸುಮಾರು 80 ಸಲ ಸಂವಿಧಾನ ತಿದ್ದುಪಡಿಯು ಕಾಂಗ್ರೆಸ್ ನೇತೃತ್ವದ ಸರ್ಕಾರದ ಅವಧಿಯಲ್ಲಾಗಿದೆ. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ ಕಾಂಗ್ರೆಸ್ ಸಂವಿಧಾನ ಶಿಲ್ಪಿ ಮಹಾನ್ ಮೇಧಾವಿ ಬಾಬ ಸಾಹೇಬ್ ಅಂಬೇಡ್ಕರ್ ರವರನ್ನೇ 1952 ಸಾರ್ವತ್ರಿಕ ಚುನಾವಣೆಯಲ್ಲಿ ಸೋಲಿಸಿದ ಕಾಂಗ್ರೆಸ್ಸಿನಿಂದ ಜನತೆ ಏನನ್ನು ನಿರೀಕ್ಷಿಸಬಹುದು ಎಂದರು
ಜಿಲ್ಲಾ ಉಪಾಧ್ಯಕ್ಷರುಗಳಾದ ಮಹಾವೀರ ಹೆಗ್ಡೆ , ಉದಯ ಕೋಟ್ಯಾನ್, ಜಯರಾಮ್ ಸಾಲ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಬೋಳ, ರಾಜ್ಯ ಯುವಮೋರ್ಚಾ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ತಾಲೂಕು ಯುವಮೋರ್ಚಾ ಅಧ್ಯಕ್ಷರಾದ ರಾಕೇಶ್ ಶೆಟ್ಟಿ, ಪ್ರಕಾಶ್ ರಾವ್, ಹಾಗೂ ಪುರಸಭಾ ಸದಸ್ಯರುಗಳು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.





















