ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ 133ನೇ ಜನ್ಮ ದಿನಾಚರಣೆ

Picture of RB NEWS

RB NEWS

Bureau Report

ಅಂಬೇಡ್ಕರ್ ಜಯಂತಿ ಕಾರ್ಯಕ್ರಮ

ಉಡುಪಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ 133ನೇ ಜನ್ಮ ದಿನಾಚರಣೆಯನ್ನು ಚುನಾವಣೆಯ ನೀತಿ ಸಂಹಿತೆ ಹಿನ್ನಲೆಯಲ್ಲಿ ಸರಳವಾಗಿ ಇಂದು ಮಣಿಪಾಲದ ರಜತಾದ್ರಿಯ ಆವರಣದಲ್ಲಿ ಆಚರಿಸಲಾಗಿತ್ತು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ ವಿದ್ಯಾಕುಮಾರಿ ರವರು ಡಾ. ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆಗೆ ಮಾರ್ಲಾಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ಸಮಾಜ ಕಲ್ಯಾಣ ಇಲಾಖಾ ಅಧಿಕಾರಿ ಅನಿತಾ ಮಡ್ಲೂರ್, ವಿವಿಧ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ದ್ವಿತೀಯ ಪಿ.ಯು.ಸಿ. ಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕ ಪಡೆದ ಹಾಸ್ಟಲ್ ವಿದ್ಯಾರ್ಥಿಗಳಾದ ಕೆ.ಜಯಂತಿ, ನರಸಪ್ಪ, ಪ್ರೀತಿ ಮಹಾಂತೇಶ್ ಚವಾಣ್, ಮಾರುತಮ್ಮ, ಮಾಣಿಕ್ಯಮ್ಮ, ಜಯರಾಜ್ ರವರನ್ನು ಗೌರವಿಸಿದರು. ಸನ್ಮಾನಿಸಲಾಯಿತು

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top