ಸಚಿವ ಸಂಪುಟದಿಂದ ಕೆ.ಎನ್.ರಾಜಣ್ಣ ವಜಾ

Picture of RB NEWS

RB NEWS

Bureau Report

ಬೆಂಗಳೂರು : ಕಾಂಗ್ರೆಸ್‌ ಹಿರಿಯ ನಾಯಕ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಈ ಬಗ್ಗೆ ಸರಕಾರಕ್ಕೆ ರಾಜ್ಯಪಾಲರಿಂದ ಅಧಿಕೃತ ಪತ್ರ ರವಾನಿಸಲಾಗಿದೆ.

ಸಚಿವ ಕೆಎನ್​ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್​. ಪ್ರಭುಶಂಕರ್​ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​ ಅವರಿಗೆ ಪತ್ರ ಬರೆದಿದ್ದಾರೆ. ಕೆಎನ್​ ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ರಾಜಭವನದಿಂದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಹೋಗಿದೆ.


ರಾಜಭವನದಿಂದ ಬಂದ ಪತ್ರದಲ್ಲಿ ಏನಿದೆ?

“ಮುಂದಿನ ಅಗತ್ಯ ಕ್ರಮಕ್ಕಾಗಿ, ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಹಾಕುವ ಕುರಿತು ರಾಜ್ಯಪಾಲರು ಸಹಿ ಮಾಡಿದ ಮೂಲ ಅಧಿಸೂಚನೆಯನ್ನು ಈ ಪತ್ರದೊಂದಿಗೆ ಕಳುಹಿಸಲು ನನಗೆ ನಿರ್ದೇಶಿಸಲಾಗಿದೆ ಎಂದು ಪತ್ರದಲ್ಲಿದೆ.

ರಾಜೀನಾಮೆ ನೀಡಿದ ರಾಜಣ್ಣ
ಹೈಕಮಾಂಡ್​ ಸೂಚನೆ ನೀಡಿದ ಬೆನ್ನಲ್ಲೇ ಶಾಸಕ ಕೆಎನ್​ ರಾಜಣ್ಣ ಅವರು ಸೋಮವಾರ (ಆ.11) ಮಧ್ಯಾಹ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಕೆ.ಎನ್.ರಾಜಣ್ಣ ನೀಡಿದ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಗೀಕರಿಸಿ, ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅವರಿಗೆ ಕಳುಹಿಸಿದರು. ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅವರು ಕೆಎನ್​ ರಾಜಣ್ಣ ರಾಜೀನಾಮೆಯನ್ನು ಅಂಗೀಕರಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top