ಸಬ್ ಜೈಲ್ ನಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನ

Picture of RB NEWS

RB NEWS

Bureau Report

ಕಾರಾಗೃಹದಲ್ಲಿರುವ ವಿಚಾರಣಾ ಖೈದಿಗಳಾದ ಮುಹಮ್ಮದ್ ಆಶಿಕ್ ಮತ್ತು ಮಹಮ್ಮದ್ ಸಕ್ಲೀನ್, ಪಿಜನ್ ಕಾಲ್ ಸಿಸ್ಟಮ್ ಕರೆ ಮಾಡಲು ತಡವಾಯಿತೆಂದು ಕುಪಿತರಾಗಿ ಕರ್ತವ್ಯದಲ್ಲಿದ್ದ ಜೈಲರ್ ಎಸ್‌.ಎ. ಶಿರೋಳ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿ ಜೋರಾಗಿ ಕೂಗಾಡಿದರು.

ಅಲ್ಲದೆ, ಅಧೀಕ್ಷಕರ ಕಚೇರಿಯಿಂದ ಕರೆದುಕೊಂಡು ಹೋಗುವಾಗ ಸಿಬ್ಬಂದಿಯೊಂದಿಗೆ ಮತ್ತೆ ಗಲಾಟೆ ಅರಂಭಿಸಿ ಸಿಬ್ಬಂದಿಯನ್ನು ತಳ್ಳಿ ಕೊಠಡಿಯಲ್ಲಿದ್ದ ಬೆಂಕಿ ನಂದಿಸುವ ಯಂತ್ರವನ್ನು ತೆಗೆಯಲು ಪ್ರಯತ್ನಿಸಿದರೆನ್ನಲಾಗಿದೆ.

ಬಳಿಕ ಅಡುಗೆ ಕೋಣೆಯಲ್ಲಿರುವ ದೊಡ್ಡ ಸೌಟನ್ನು ಮತ್ತು ಚಹಾ ಮಾಡುವ ಸೌಟನ್ನು ತಂದು ಮುಹಮ್ಮದ್ ಸಕ್ಲೀನ್ ತನ್ನ ಕೊಠಡಿಯ ಮರದ ಕುರ್ಚಿಯನ್ನು ತೆಗೆದುಕೊಂಡು ಸಿಬ್ಬಂದಿಗೆ ಹಲ್ಲೆ ಮಾಡಲು ಪ್ರಯತ್ನಿಸಿದ್ದ ಎಂದು ದೂರಲಾಗಿದೆ.

ಈ ವೇಳೆ ಅವರನ್ನು ಸಿಬ್ಬಂದಿ ಸೆರೆಹಿಡಿದರು. ಅಲ್ಲದೆ ಕರ್ತವ್ಯದಲ್ಲಿದ್ದ ಜಿಲ್ಲಾ ಕಾರಾಗೃಹ ಅಧೀಕ್ಷಕ ಸಿದ್ದರಾಮ ಬಿ. ಪಾಟೀಲ್ ಹಾಗೂ ಸಿಬ್ಬಂದಿಗೆ ಹಲ್ಲೆ ಮಾಡಲು ಪ್ರಯತಿಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವುದಾಗಿ ದೂರಲಾಗಿದೆ.

ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅವರನ್ನು ಇಲ್ಲಿಂದ ಬೇರೆ ಸೆಂಟ್ರಲ್ ಜೈಲಿಗೆ ಸ್ಥಳಾಂತರ ಮಾಡುವಂತೆ ಜೈಲು ಅಧೀಕ್ಷಕರು ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ಅನುಮತಿ ನೀಡಿದೆ.

ಮುಂದೆ ಇಲಾಖೆ ಸೂಚಿಸುವ ಸೆಂಟ್ರಲ್ ಜೈಲಿಗೆ ಇವರನ್ನು ಸ್ಥಳಾಂತರಿಸಲಾಗುತ್ತದೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top