‘ಸಹಕಾರಿ ರತ್ನ’ ಪ್ರಶಸ್ತಿಗೆ ಭಾಜನರಾದ ಸಹಕಾರಿ ಧುರೀಣ ಭಾಸ್ಕರ ಎಸ್. ಕೋಟ್ಯಾನ್
RB NEWS
Bureau Report
‘ಸಹಕಾರಿ ರತ್ನ’ ಪ್ರಶಸ್ತಿಗೆ ಭಾಜನರಾದ ಸಹಕಾರಿ ಧುರೀಣ ಭಾಸ್ಕರ ಎಸ್. ಕೋಟ್ಯಾನ್
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಸಹಕಾರಿ ಧುರೀಣರಾದ ಭಾಸ್ಕರ ಎಸ್. ಕೋಟ್ಯಾನ್ ಅವರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇವರು ಪುರಸ್ಕರಿಸುವ ಪ್ರತಿಷ್ಠಿತ ‘ಸಹಕಾರಿ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಸಹಕಾರಿ ಕ್ಷೇತ್ರದಲ್ಲಿ ಸಲ್ಲಿಸಿದ ಅವಿರತ ಸೇವೆ ಮತ್ತು ಸಾಧನೆಗಳನ್ನು ಪರಿಗಣಿಸಿ ಅವರಿಗೆ ಈ ಉನ್ನತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಭಾಸ್ಕರ ಎಸ್. ಕೋಟ್ಯಾನ್ ಅವರು ನ.14ರಂದು ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಈ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.
ಕೊಳಕೆ ಇರ್ವತ್ತೂರಿನವರಾದ ಭಾಸ್ಕರ ಎಸ್. ಕೋಟ್ಯಾನ್ ಅವರು ಸಹಕಾರಿ ಕ್ಷೇತ್ರದಲ್ಲಿ ಮಾತ್ರವಲ್ಲದೆ ಕಂಬಳ ಕ್ಷೇತ್ರದಲ್ಲೂ ಪ್ರಸಿದ್ಧರಾಗಿದ್ದಾರೆ.
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ, ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘದ (ಸಿ.ಎ ಬ್ಯಾಂಕ್) ಅಧ್ಯಕ್ಷ ಹಾಗೂ ಮೂಡುಬಿದಿರೆ ಭಾರತ್ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.