ಸಾಣೂರು ಗ್ರಾ.ಪಂ. ದ್ವಿತೀಯ ಗ್ರಾಮಸಭೆ
ಕಾರ್ಕಳ: ಕಾರ್ಕಳ ತಾಲೂಕು ಸಾಣೂರು ಗ್ರಾಮ ಪಂಚಾಯತ್ ನ ದ್ವಿತೀಯ ಗ್ರಾಮಸಭೆಯು ಮಾಚ್೯ 4ರಂದು ಗ್ರಾ.ಪಂ. ಅಧ್ಯಕ್ಷ ಯುವರಾಜ್ ಜೈನ್ ಅಧ್ಯಕ್ಷತೆಯಲ್ಲಿ ಸಾಣೂರು ಸುವರ್ಣ ಗ್ರಾಮೋದಯ ಸೌಧದಲ್ಲಿ ಜರುಗಿತು.
ಗ್ರಾಮಸಭಾ ನೋಡೆಲ್ ಅಧಿಕಾರಿ ಶ್ರೀನಿವಾಸ ಬಿ.ವಿ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ತೋಟಗಾರಿಕಾ ಇಲಾಖೆ ಇವರು ಉಪಸ್ಥಿತರಿದ್ದು, ತೋಟಗಾರಿಕಾ ಇಲಾಖೆಯ ಬಗ್ಗೆ ಮಾಹಿತಿ ನೀಡಿದರು.
ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದು, ಇಲಾಖಾ ಮಾಹಿತಿಗಳನ್ನು ನೀಡಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಯಶೋಧಾ ವಿ ಶೆಟ್ಟಿ,, ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿವರ್ಗ, ಶಾಲಾ ಮುಖ್ಯೋಪಾಧ್ಯಾಯರು, ಅಂಗನವಾಡಿ ಕಾರ್ಯಕರ್ತರು, ಆರೋಗ್ಯ ಆಶಾ ಕಾರ್ಯಕರ್ತರು, ಶಕ್ತಿ ಸಮೃದ್ಧಿ ಸಂಜೀವಿನಿ ಒಕ್ಕೂಟ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಧು ಎಂ.ಸಿ ಸ್ವಾಗತಿಸಿ, ಪ್ರಸ್ತಾವಿಕ ಮಾತನ್ನಾಡಿದರು.
ಗ್ರಾ.ಪಂ. ಕಾರ್ಯದರ್ಶಿ ಸವಿತಾ ಪ್ರಭು ಪಂ. ವಾರ್ಷಿಕ ವರದಿ ವಾಚಿಸಿದರು.
ಗ್ರಂಥಾಲಯ ಮೇಲ್ವಿಚಾರಕಿ ಜ್ಯೋತಿ ಭಂಡಾರ್ಕರ್ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.






































