ಸಾಧಕ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ಸಲ್ಲಿಕೆ: ಕಾರ್ಕಳ ರೆಂಜಾಳ ವಿನಾಯಕ ನಾಯ್ಕ ಪ್ರಶಸ್ತಿ ಸ್ವೀಕಾರ

ಬೆಂಗಳೂರು : ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು (ಓರ್ವ ವಿಶೇಷ ಶಿಕ್ಷಕರೂ ಒಳಗೊಂಡಂತೆ) 2024-25 ನೇ ಸಾಲಿಗೆ ಈ ಕೆಳಕಂಡಂತೆ ಆಯ್ಕೆ ಮಾಡಲಾಗಿತ್ತು.

ಕಾರ್ಕಳ ರೆಂಜಾಳ ಸರಕಾರಿ ಸಂಯುಕ್ತ ಪ್ರೌಢ ಶಾಲೆಯ ಸಮಾಜ ವಿಜ್ಞಾನದ ಶಿಕ್ಷಕ ವಿನಾಯಕ ನಾಯ್ಕ ಅವರಿಗೆ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಈ ಪುರಸ್ಕೃತರ ಪಟ್ಟಿಯಲ್ಲಿನ ಮಹಿಳಾ ಶಿಕ್ಷಕರುಗಳಿಗೆ ಅಕ್ಷರ ಮಾತೆ ಸಾವಿತ್ರಿಬಾಯಿ ಫುಲೆ” ಇವರ ಹೆಸರಿನಲ್ಲಿ ಸಪ್ಟೆಂಬರ್ 05 ರಂದು ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲಾಯಿತು.






































