ಸಾಧನೆಗೈದ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು
RB NEWS
Bureau Report
ಕಾರ್ಕಳ :ದಿಲನ್ ಜುಡೆ ಪಯಾಸ್, ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಎಂ.ಜಿ.ಎಂ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಉಡುಪಿಯ ಎಂ.ಜಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ 100 ಮೀ. ಫ್ರೀಸ್ಟೈಲ್ ನಲ್ಲಿ ಚಿನ್ನದ ಪದಕ ಹಾಗೂ 50 ಮೀ. ಫ್ರೀಸ್ಟೈಲ್ ನಲ್ಲಿ ಬೆಳ್ಳಿಯ ಪದಕಗಳನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವರ್ಗದವರು ಅಭಿನಂದಿಸಿದ್ದಾರೆ.