ಸಾಮಾಜಿಕ ನ್ಯಾಯದ ಸಂದೇಶ ಮತ್ತು ಸಮಾನತೆಯ ಮೌಲ್ಯಗಳು
ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಘಟಕದ ವತಿಯಿಂದ ರವಿವಾರ ಕುಂದಾಪುರದ ಹಂಚು ಕಾರ್ಮಿಕರ ಭವನದಲ್ಲಿ ಡಾ. ಬಿಆರ್ ಅಂಬೇಡ್ಕರ್ 135ನೇ ಜಯಂತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಲಿತ ಹಕ್ಕುಗಳ ಸಮಿತಿಯ ಅಧ್ಯಕ್ಷರಾದ ಸಂಜೀವ ಬಳ್ಕೂರು ಅವರು ವಹಿಸಿದ್ದರು.
ಕುಂದಾಪುರ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ರಮೇಶ್ ರವರು ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.



























