ಸಾಲ ಕೇಳ್ತಾ ಇಲ್ಲ.. ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ
ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಒಕ್ಕೊರಲ ಆಗ್ರಹ
ವರದಿ: ಅನುಷ್ ಮಂಗಳೂರು
ಮಂಗಳೂರು: ಹಿರಿಯ ನಾಗರಿಕರ ದಿನಾಚರಣೆಯ ದಿನದಂದು ನಿವೃತ್ತ ಸರಕಾರಿ ನೌಕರರು ಪ್ರತಿಭಟನೆಗೆ ಇಳಿಸುವುದು ಸರಿಯಲ್ಲ. ಸಾಲ ನಾವೇನೂ ಕೇಳ್ತಾ ಇಲ್ಲ… ಸುದೀರ್ಘ ವರ್ಷಗಳ ಕಾಲ ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಬೇಕು. ಇನ್ನಾದರೂ ಹಿರಿಯರಾದ ನಮ್ಮನ್ನು ಬೀದಿಗೆ ಇಳಿಯುವಂತೆ ಮಾಡಬೇಡಿ ಎನ್ನುವುದು ನಮ್ಮ ಆಗ್ರಹವಾಗಿದೆ.
-ಹೀಗೆಂದವರು ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆ ದ.ಕ. ಜಿಲ್ಲಾ ಪ್ರಧಾನ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ.


ಅವರು ಮಂಗಳವಾರ ಮಂಗಳೂರಿನ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ವೇದಿಕೆಯ ವತಿಯಿಂದ ಜು.1,2022ರಿಂದ ಜು.31, 2024ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ಡಿ.ಸಿ.ಆರ್.ಜಿ, ಕಮ್ಯೂಟೇಶನ್, ಗಳಿಕೆ ರಜೆ ನಗದೀಕರಣದ ಮೊತ್ತವನ್ನು ಏಳನೇ ವೇತನ ಆಯೋಗದ ಲೆಕ್ಕಚಾರದಲ್ಲಿ ನೀಡಬೇಕು. ಪರಿಷ್ಕøತ ಆದೇಶ ನೀಡಬೇಕು ಎಂದು ಆಗ್ರಹಿಸಿ ನಿವೃತ್ತ ಸರಕಾರಿ ನೌಕರರು.
ರಾಜ್ಯವ್ಯಾಪಿ ಪ್ರತಿಭಟನೆ, ಉಪವಾಸ ಸತ್ಯಾಗ್ರಹ
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ನಿವೃತ್ತ ಸರಕಾರಿ ನೌಕರರ ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟನೆ ನಡೆಸುತ್ತಾರೆ. ಅ.2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಿವೃತ್ತ ಸರಕಾರಿ ನೌಕರರು ಉಪವಾಸ ಸತ್ಯಾಗ್ರಹವನ್ನು ಕೈಗೊಂಡಿದ್ದಾರೆ. ಮುಂದೆ ಬೆಳಗಾವಿಯಿಂದ ಬೆಂಗಳೂರು ವಿಧಾನ ಸೌಧ ತನಕ ಪಾದಯಾತ್ರೆ ಹಾಗೂ ಇಲ್ಲೂ ಸರಕಾರ ಸರಿಯಾದ ಕ್ರಮ ಜರುಗಿಸದೇ ಹೋದಲ್ಲಿ ಕಾನೂನು ಕ್ರಮಕ್ಕೆ ಮುಂದಾಗುತ್ತೇವೆ ಎಂದು ಜಿಲ್ಲಾ ಪ್ರಧಾನ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ ಹೇಳುತ್ತಾರೆ.






































