ಸಿಡಿಲು ಬಡಿದು ವಿದ್ಯಾರ್ಥಿ ಮೃತ್ಯು

Picture of RB NEWS

RB NEWS

Bureau Report

ಬಂಟ್ವಾಳ : ಸಿಡಿಲು ಬಡಿದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸಂಭವಿಸಿದೆ.

ಕೆದಿಲ ಗ್ರಾಮದ ಗಡಿಯಾರ ಸಮೀಪ ಮುರಿಯಾಜೆ ಮನೆಯ ಚಂದ್ರಹಾಸ ಎಂಬವರ ಪುತ್ರ ಸುಬೋಧ್ ಸಿ (14) ಸಾವನ್ನಪ್ಪಿದ ಬಾಲಕ. ಕಲ್ಲಡ್ಕ ಶ್ರೀ ರಾಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿಯಾಗಿದ್ದನು.‌

ಸಿಡಿಲು ಬಡಿದು ಗಂಭೀರ ಗಾಯಗೊಂಡಿದ್ದ ಕೂಡಲೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯಕೀಯ ಪರೀಕ್ಷೆ ಗೊಳಪಡಿಸಿದ ಸಂದರ್ಭದಲ್ಲಿ ಬಾಲಕ ಮೃತಪಟ್ಟಿರುವುದು ದೃಢಪಡಿಸಲಾಗಿದೆ.

ರವಿವಾರ ಸಂಜೆ 5ರ ವೇಳೆಗೆ ಸುಭೋದ್ ಮನೆಯಂಗಳದಲ್ಲಿ ನಿಂತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಮರಣೋತ್ತರ ಪರೀಕ್ಷೆಗಾಗಿ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನೆ ಕೊಂಡೊಯ್ಯಲಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top