ಸಿದ್ದರಾಮಯ್ಯರವರಿಂದ ರಾಜ್ಯದ ಜನತೆಗೆ 6ನೇ ಗ್ಯಾರೆಂಟಿ :ಬಿಪಿಎಲ್ ಪಡಿತರ ಚೀಟಿ ರದ್ದತಿ ಭಾಗ್ಯ. -ವಿ ಸುನಿಲ್ ಕುಮಾರ್

Picture of RB NEWS

RB NEWS

Bureau Report

ಸಿದ್ದರಾಮಯ್ಯರವರಿಂದ ರಾಜ್ಯದ ಜನತೆಗೆ 6ನೇ ಗ್ಯಾರೆಂಟಿ:ಬಿಪಿಎಲ್ ಪಡಿತರ ಚೀಟಿ ರದ್ದತಿ ಭಾಗ್ಯ
-ವಿ ಸುನಿಲ್ ಕುಮಾರ್

ಕಾರ್ಕಳದ ಬಜಗೋಳಿಯಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯ ಸರ್ಕಾರ ಕೆಲವೊಂದು ತಾಂತ್ರಿಕ ಕಾರಣಗಳನ್ನು ನೀಡಿ ಪಡಿತರ ಚೀಟಿ ನೀಡದಂತೆ ನಿರ್ದೇಶನ ನೀಡಿದೆ. ಇದರಿಂದಾಗಿ ಲಕ್ಷಾಂತರ ಜನ ಅನ್ನ ಭಾಗ್ಯ ಯೋಜನೆಯಿಂದ ವಂಚಿತರಾಗಿದ್ದಾರೆ. ತನ್ನ ಆರ್ಥಿಕ ನೀತಿಯ ವೈಫಲ್ಯವನ್ನು ಸರಿಪಡಿಸಲು ರಾಜ್ಯದ ಜನತೆಯ ಮೇಲೆ ಗಧಾ ಪ್ರಹಾರ ಮಾಡುತ್ತಿರುವ ಸರ್ಕಾರ, ಗ್ಯಾರಂಟಿಗಳನ್ನು ಕೊಡಲಾಗದೆ ಹೀಗೆ ತನ್ನ ಜನವಿರೋಧಿ ನೀತಿ ಸಂಕಲ್ಪವನ್ನು ಪರೋಕ್ಷವಾಗಿ ಈಡೇರಿಸುತ್ತಿದೆ. ಈ ನಿಟ್ಟಿನಲ್ಲಿ ನಾವು ಸರ್ಕಾರದ ಈ ಜನ ವಿರೋಧಿ ನೀತಿ, ಜನರಿಗೆ ಮಾಡಿರುವ ಮೋಸವನ್ನು ರಾಜ್ಯದ ಜನತೆಗೆ ತಿಳಿಸಬೇಕಾಗಿದೆ ಎಂದರು.

ಇಡೀ ರಾಜ್ಯ ಸರ್ಕಾರ ಭ್ರಷ್ಟಾಚಾರದಿಂದ ಕೂಡಿದೆ . ಸ್ವತಃ ಮುಖ್ಯಮಂತ್ರಿಗಳೇ ಮುಡಾ ಹಗರಣದಲ್ಲಿ ಸಿಲುಕಿದ್ದಾರೆ. ಮುಡಾದಿಂದ ಅಕ್ರಮವಾಗಿ ಪಡೆದಿರುವ 14 ಸೈಟುಗಳನ್ನು ವಾಪಸ್ ನೀಡುವ ಮೂಲಕ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಇನ್ನೂ ಅಧಿಕಾರಕ್ಕೆ ಅಂಟಿಕೊಳ್ಳದೇ, ನೈತಿಕ ಹೊಣೆ ಹೊತ್ತಿಕೊಂಡು ತನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಹುದ್ದೆಯ ಘನತೆಯನ್ನು ಕಾಪಾಡಿ ಎಂದು ಸಭೆಯಲ್ಲಿ ಹೇಳಿದ್ದಾರೆ.

ಮಂಡಲ ಅಧ್ಯಕ್ಷ ನವೀನ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ರಾದ ಮಹಾವೀರ್ ಹೆಗ್ಡೆ, ಜಿಲ್ಲಾ ಕಾರ್ಯದರ್ಶಿ ಉದಯ್ ಕೋಟ್ಯಾನ್, ಕಾರ್ಕಳ ಮಂಡಲದ ಉಪಾಧ್ಯಕ್ಷ ಅನಂತಕೃಷ್ಣ ಶೆಣೈ, ಮರ್ಣೆ ಶಕ್ತಿ ಕೇಂದ್ರ ಅಧ್ಯಕ್ಷ ಸಂತೋಷ್ ಶೆಟ್ಟಿ ಹಿರ್ಗಾನ ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top