ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ ,ಉಗ್ರರಿಗೆ ಸುಗ್ಗಿ – ಶಾಸಕ ಸುನೀಲ್ ಕುಮಾರ್
ಕಾರ್ಕಳ : ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ಆರೋಪಿಸಿದ್ದಾರೆ.

ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ? ಎಂಬುದನ್ನು ಸ್ಪಷ್ಟಪಡಿಸಬೇಕು. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ ! ಎಂದು ಶಾಸಕ ಸುನೀಲ್ ಕುಮಾರ್ ಲೇವಡಿ ಮಾಡಿದ್ದಾರೆ.
ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ ? ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ ? ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದು ಶಾಸಕ ಸುನೀಲ್ ಕುಮಾರ್ ಸಂಶಯ ವ್ಯಕ್ತಪಡಿಸಿದ್ದಾರೆ.





















