ಸುಖಾನಂದ ಶೆಟ್ಟಿ ಕೊಲೆ ಪ್ರಕರಣ :19 ವರ್ಷಗಳ ಬಳಿಕ ಆರೋಪಿ ಅಬ್ದುಲ್ ಸಲಾಂ ಬಂಧನ

ಮಂಗಳೂರು : 2006 ಡಿಸೆಂಬರ್ 01ರಂದು ನಡೆದ ಸುಖಾನಂದ ಶೆಟ್ಟಿ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 19 ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಅಬ್ದುಲ್ ಸಲಾಂ (47)…..
ಪ್ರಕರಣದ ವಿವರ;
ದಿನಾಂಕ: 01.12.2006 ರಂದು ಸುರತ್ಕಲ್ ಪೊಲೀಸ್ ಠಾಣಾ ಸರಹದ್ದಿನ ಹೊಸಬೆಟ್ಟು ಬಳಿ ಸುಖಾನಂದ್ ಶೆಟ್ಟಿ ಎಂಬವರನ್ನು ಕಬೀರ್ ಹಾಗೂ ಆತನ ಸಹಚರರು ಕೊಲೆ ಮಾಡಿ ಪರಾರಿಯಾಗಿದ್ದು ಪ್ರಕರಣದ ಪ್ರಮುಖ ಆರೋಪಿ ಕಬೀರ್ ಎಂಬಾತನಿಗೆ ಲತೀಫ್ @ ಅಡ್ಡರು ಲತೀಫ್ ಹಾಗೂ ಪ್ರಸ್ತುತ ಕಿನ್ನಿಪದವು ನಿವಾಸಿ ಅಬ್ದುಲ್ ಸಲಾಂ ಅಡ್ಡರು ಎಂಬ ಸಹೋದರರು ಅದ್ದೂರ್ ಟಿಬೇಟ್ ಕಾಲೋನಿಯಲ್ಲಿರುವ ಮನೆಯಲ್ಲಿ ಆಶ್ರಯ ನೀಡಿ 2 ದಿನ ಮನೆಯಲ್ಲಿರಿಸಿಕೊಂಡು ಪೊಲೀಸರಿಂದ ತಪ್ಪಿಸಿ ತಲೆಮರೆಸಿಕೊಳ್ಳಲು ಸಹಕಾರ ನೀಡಿ ನಂತರ ಕಬೀರ್ ನನ್ನು ವಾಹನದಲ್ಲಿ ಕೇರಳದ ಕಾಸರಗೋಡು ಬಳಿ ಬಿಟ್ಟು ನಂತರ ತಲೆಮರೆಸಿಕೊಂಡಿದ್ದ. ಅಬ್ದುಲ್ ಸಲಾಂ ಅಡ್ಡೂರು ಘಟನೆ ನಡೆದು ಮೂರು ತಿಂಗಳ ಬಳಿಕ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ. ಆರೋಪಿಯು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದರಿಂದ ಆರೋಪಿಯ ಮೇಲೆ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.






































